Advertisement

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ವಿವಿಧೆಡೆ ಭೇಟಿ ಪರಿಶೀಲನೆ

12:03 PM Dec 21, 2019 | Team Udayavani |

ಯಾದಗಿರಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಶನಿವಾರ ಯಾದಗಿರಿ ಜಿಲ್ಲೆಯ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

Advertisement

ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದಲ್ಲಿ ಏಕಲವ್ಯ ಮಾದರಿ ವಸತಿ‌ ಶಾಲೆ  ಕಟ್ಟಡ ಕಾಮಗಾರಿ ಪರಿಶಿಲನೆ, ಟೆಕ್ಸ್ ಟೈಲ್ ಟ್ರೈನಿಂಗ್ ಸೆಂಟರ್ ಕಾಮಗಾರಿ ಪರಿಶೀಲನೆ ನಡೆಸಿ, ಗ್ರಾಮದಲ್ಲಿ ಸಂಚರಿಸಿ ವೈಯಕ್ತಿಕ  ಶೌಚಾಲಯ  ಬಳಕೆಯ ಕುರಿತು ವಿಚಾರಿಸಿದರು.

ಶೌಚಾಲಯ ನಿರ್ಮಿಸಿಕೊಳ್ಳದಿದ್ದರೆ‌, ಸರ್ಕಾರದಿಂದ ಶೌಚಾಲಯ ನಿರ್ಮಾಣಕ್ಕೆ ನೀಡಿದ ಅನುದಾನ ವಾಪಸ್ ಪಡೆಯಲು ಸಂಬಂಧಿಸಿದ ಸಾರ್ವಜನಿಕರಿಗೆ ಎಚ್ಚರಿಕೆಯ ನೋಟಿಸ್ ನೀಡಲು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಸೂಚನೆ ನೀಡಿದರು.

ಯಾದಗಿರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next