Advertisement

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

12:41 AM Dec 31, 2024 | Team Udayavani |

ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರಿಗೆ ಸೂಕ್ತ ಭದ್ರತೆ ಕೈಗೊಳ್ಳಬೇಕು ಎಂದು ಎಂದು ತಮಿಳು ನಟ, ತಮಿಳಿಗ ವೆಟ್ರಿ ಕಳಗಂ ಪಕ್ಷದ ನಾಯಕ ವಿಜಯ್‌ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯಪಾಲ ಆರ್‌.ಎನ್‌.ರವಿ ಅವರನ್ನು ಸೋಮವಾರ ಭೇಟಿ ಯಾಗಿ ಮನವಿ ಸಲ್ಲಿಸಿದ್ದಾರೆ.

Advertisement

ಡಿ.23ರಂದು ಚೆನ್ನೈಯ ಅಣ್ಣಾ ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ರಾಜಕೀಯ ತಿರುವು ಪಡೆದುಕೊಂಡಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಇದಕ್ಕೂ ಮೊದಲು ಘಟನೆ ವಿರುದ್ಧ ಹೇಳಿಕೆ ನೀಡಿದ್ದ ನಟ ವಿಜಯ್‌ “ಮಹಿಳೆಯರನ್ನು ರಕ್ಷಿಸುವಲ್ಲಿ ಡಿಎಂಕೆ ಸರ ಕಾ ರ ವಿಫ‌ಲವಾಗಿದೆ. ಹೀಗಾಗಿ, ಸರ ಕಾ ರಕ್ಕೆ ಮನವಿ ಸಲ್ಲಿಸಿ ಪ್ರಯೋಜನವಿಲ್ಲ’ ಎಂದಿದ್ದರು. ರಾಜ್ಯಪಾಲರನ್ನು ನಟ ವಿಜಯ್‌ ಭೇಟಿಯಾದ ಬಗ್ಗೆ ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಸ್ವಾಗತಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next