Advertisement

Vijay Raghavendra: ಹೊಸ ಚಿತ್ರದಲ್ಲಿ ವಿಜಯ ರಾಘವೇಂದ್ರ

02:48 PM Aug 26, 2024 | Team Udayavani |

ನಟ ವಿಜಯ ರಾಘವೇಂದ್ರ ಹೊಸ ಸಿನಿಮಾ ಒಪ್ಪಿ ಕೊಂಡಿದ್ದು, ಈ ಚಿತ್ರವನ್ನು ಆಕಾಶ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಪ್ರಕಾಶ್‌ ಸಿದ್ದಪ್ಪ ನಿರ್ಮಿಸುತ್ತಿದ್ದಾರೆ. ನಿರ್ದೇಶಕ ಪಿ.ಸಿ.ಶೇಖರ್‌ ಈ ಚಿತ್ರದ ನಿರ್ದೇಶಕರು.

Advertisement

ಈ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಪ್ರಕಾಶ್‌, ರೈತರ ಕುರಿತ ವಿಷಯ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ ಮತ್ತು ಪಿ.ಸಿ. ಶೇಖರ್‌ ಅಲಯನ್ಸ್‌ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದರು. ಈಗ ಅವರು ಅಲಯನ್ಸ್‌ ಯೂನಿವರ್ಸಿಟಿಯ ಫಿಲಂ ಮೇಕಿಂಗ್‌ ಕೋರ್ಸನ ಸಹಯೋಗದಲ್ಲಿ ಆಕಾಶ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷದ ಸಂಗತಿ. ಅಲಯನ್ಸ್‌ನಲ್ಲಿ ಕಲಿತು ಈಗ ಬೇರೆ ಬೇರೆ ಉದ್ಯೋಗದಲ್ಲಿರುವ ಹಳೆ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದಲ್ಲಿ ನಮ್ಮೊಂದಿಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುವ ಪ್ರಯತ್ನ ನಡೆಯುತ್ತಿದೆ.

ಚಿತ್ರದಲ್ಲಿ ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದು ತಂಡದ ಮಾತು.

Advertisement

Udayavani is now on Telegram. Click here to join our channel and stay updated with the latest news.

Next