Advertisement

ಯಾರಾಗಲಿದ್ದಾರೆ ಗುಜರಾತ್‍ನ ಮುಂದಿನ ಸಿಎಂ?

05:34 PM Sep 11, 2021 | Team Udayavani |

ಅಹ್ಮದಾಬಾದ್ : ಗುಜರಾತ್ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ರಾಜಕೀಯ ವಲಯದಲ್ಲಿ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವ ಕುತೂಹಲ ಮನೆ ಮಾಡಿದೆ.

Advertisement

ಮತ್ತೊಂದು ಬಾರಿ ಗುಜರಾತ್ ಗದ್ದುಗೆ ಏರಲು ಬಿಜೆಪಿ ಹೈಕಮಾಂಡ್ ಸಿದ್ಧತೆ ನಡೆಸಿದೆ. ಇದರ ಮೊದಲ ಹೆಜ್ಜೆ ಎನ್ನುವಂತೆ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ರಾಜೀನಾಮೆ ಪಡೆದಿದೆ. ರೂಪಾನಿ ಅವರ ರಾಜೀನಾಮೆ ದಿಢೀರ್ ಅನ್ನಿಸಿದರೂ, ಇದರ ಹಿಂದೆ ಹೈಕಮಾಂಡ್‍ನ ವ್ಯವಸ್ಥಿತ ಯೋಜನೆ ಇದೆ ಎನ್ನುವುದು ರಾಜಕೀಯ ಪಂಡಿತರ ವಾದವಾಗಿದೆ.

ರೂಪಾನಿ ರಾಜೀನಾಮೆ ಬೆನ್ನಲ್ಲೆ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು, ಪ್ರಮುಖವಾಗಿ ಮೂರು ಜನರ ಹೆಸರುಗಳು ಮುನ್ನೆಲೆಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಗುಜರಾತ್ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಕ್ಯಾಬಿನೆಟ್ ಮಂತ್ರಿ ಆರ್‍.ಸಿ ಫಾಲ್ದು ಅವರ ಹೆಸರುಗಳು ಮುಖ್ಯಮಂತ್ರಿ ಸ್ಥಾನದ ರೇಸ್‍ನಲ್ಲಿವೆ. ಈ ಮೂವರಲ್ಲಿ ಮುಖ್ಯಮಂತ್ರಿ ಕುರ್ಚಿ ಯಾರಿಗೆ ಒಲಿಯಲಿದೆ ಎನ್ನುವುದು ಸದ್ಯಕ್ಕೆ ಕುತೂಹಲದ ಕೇಂದ್ರ ಬಿಂದುವಾಗಿದೆ.

ಇನ್ನು ಮುಂದಿನ ಮುಖ್ಯಮಂತ್ರಿ ಆಯ್ಕೆಯನ್ನು ಪಕ್ಷದ ಪ್ರಕ್ರಿಯೆಗೆ ಅನುಗುಣವಾಗಿ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಭೂಪೇಂದ್ರ ಯಾದವ್ ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next