Advertisement
ಶತಕವಾಯಿತು: ಮಹತ್ತದ ಬೆಳವಣಿಗೆಯಲ್ಲಿ ಗುಜರಾತ್‌ನ ಲುನವಾಡಾದ ಸ್ವತಂತ್ರ ಶಾಸಕ ರತನ್ ಸಿನ್ಹ ರಾಥೋಡ್ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಹೀಗಾಗಿ ಸದನದಲ್ಲಿ ಬಿಜೆಪಿ ಸಂಖ್ಯೆ 100 ಆಗಿದೆ. ಅವರು ಎರಡು ದಶಕಗಳಿಂದ ಕಾಂಗ್ರೆಸ್ ಸದಸ್ಯರಾಗಿದ್ದರು. ಚುನಾವಣೆ ವೇಳೆ ಕಾಂಗ್ರೆಸ್‌ನಿಂದ ಅವರನ್ನು ಉಚ್ಚಾಟಿಸಲಾಗಿತ್ತು.
ಹಿಮಾಚಲ ಪ್ರದೇಶದಲ್ಲಿ ಬಹುಮತ ಪಡೆದಿರುವ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಕೇಂದ್ರ ಸಚಿವ ಜೆ.ಪಿ. ನಡ್ಡಾ ಹಾಗೂ ಜೈರಾಂ ಠಾಕೂರ್ ಅವರೂ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿ ಹೊರಹೊಮ್ಮಿದ್ದಾರೆ. ಆದರೆ, ಹಂಗಾಮಿ ಮುಖ್ಯಮಂತ್ರಿ ಧುಮಾಲ್ ಬೆಂಬಲಿಗರು ಧುಮಾಲ್ ಅವರನ್ನೇ ಸಿಎಂ ಗಾದಿಗೇರಿಸಬೇಕೆಂದು ಪಟ್ಟು ಹಿಡಿದ್ದಾರೆ. ಏತನ್ಮಧ್ಯೆ, ಶಾಸಕರ ಅಭಿಪ್ರಾಯ ಸಂಗ್ರಹಿಸಲು ಕೇಂದ್ರದಿಂದ ಆಗಮಿಸಿರುವ ನಿರ್ಮಲಾ ಸೀತಾರಾಮನ್ ಹಾಗೂ ನರೇಂದ್ರ ತೋಮರ್ ಅವರ ಸಭೆಯಲ್ಲಿ ಧುಮಾಲ್ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ.