ರಬಕವಿ-ಬನಹಟ್ಟಿ: ರಬಕವಿ ಬನಹಟ್ಟಿ ರಾಮಪುರ ನಗರದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ವಿಜಯ ಸಂಕಲ್ಪ ಯಾತ್ರೆ ನಡೆಯಿತು.
ಬನಹಟ್ಟಿಯ ನೂಲಿನ ಗಿರಣಿಯಿಂದ ಆರಂಭಗೊಂಡ ಯಾತ್ರೆ ಬನಹಟ್ಟಿ, ರಾಮಪುರ ಹಾಗೂ ರಬಕವಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ನಂತರ ತೇರದಾಳಕ್ಕೆ ತೆರಳಿತು.
ವಿಜಯ ಸಂಕಲ್ಪ ಯಾತ್ರೆ ನಡೆಯುತ್ತಿದ್ದ ಸ್ಥಳಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೂವಿನ ಮಳೆಗೈದರು.
ಸಂಸದ ಪಿ.ಸಿ.ಗದ್ದಿಗೌಡರ, ಸಚಿವರಾದ ಗೋವಿಂದ ಕಾರಜೋಳ, ಮುರಗೇಶ ನಿರಾಣಿ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಶಾಸಕ ಸಿದ್ದು ಸವದಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಜಿ.ಎಸ್.ನ್ಯಾಮಗೌಡ, ಧರೆಪ್ಪ ಉಳ್ಳಾಗಡ್ಡಿ, ಸುರೇಶ ಅಕ್ಕಿವಾಟ, ಆನಂದ ಕಂಪು, ಬಸವರಾಜ ಕೊಣ್ಣೂರ, ಡಾ.ಮಹಾವೀರ ಡಾನಿಗೊಂಡ, ಸಂಜಯ ತೆಗ್ಗಿ ಸೇರಿದಂತೆ ಅನೇಕರು ಇದ್ದರು.
ಬೃಹತ್ ಬೈಕ್ ರ‍್ಯಾಲಿ : ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಬೈಕ್ ಸವಾರರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು.
Related Articles
ವಿಜಯ ಸಂಕಲ್ಪ ಯಾತ್ರೆಯಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಈ ಬಾರಿ ನೇಕಾರ ಈ ಬಾರಿ ನೇಕಾರ ಎಂಬ ಘೋಷಣೆಗಳ ಕೂಗುವುದರ ಜೊತೆಗೆ ಭಿತ್ತಿ ಪತ್ರಗಳನ್ನು ಪ್ರದರ್ಶನ ಮಾಡಿದರು.
ಇದನ್ನೂ ಓದಿ: ಚುನಾವಣಾ ಪೂರ್ವ ಸಮೀಕ್ಷೆ: ಬಬಲೇಶ್ವರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆಲುವು