Advertisement

31ನೇ ಜಿಲ್ಲೆಯಾಗಿ ವಿಜಯನಗರ: ಅಧಿಕೃತ ಘೋಷಣೆ ಮಾಡಿದ ರಾಜ್ಯ ಸರ್ಕಾರ

03:34 PM Feb 08, 2021 | Team Udayavani |

ಬಳ್ಳಾರಿ: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವು ಅಧಿಕೃತವಾಗಿ ರಚನೆಯಾಗಿದೆ. ರಾಜ್ಯ ಸರ್ಕಾರ ಈ ಬಗ್ಗೆ ಸೋಮವಾರ ರಾಜಪತ್ರ ಪ್ರಕಟಿಸಿದೆ.

Advertisement

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಆರು ತಾಲೂಕುಗಳನ್ನು ಒಳಗೊಂಡ ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನು ಅಧಿಕೃತಗೊಳಿಸಲಾಗಿದೆ.

ನೂತನ ವಿಜಯನಗರ ಜಿಲ್ಲೆಯಲ್ಲಿ ಹೊಸಪೇಟೆ, ಕೂಡ್ಲಿಗಿ, ಹಗರಿ ಬೊಮ್ಮನಹಳ್ಳಿ, ಕೊಟ್ಟೂರು, ಹೂವಿನ ಹಡಗಲಿ ಮತ್ತು ಹರಪನಹಳ್ಳಿ ತಾಲೂಕುಗಳಿರಲಿದೆ. ಹೊಸಪೇಟೆ ಜಿಲ್ಲಾ ಕೇಂದ್ರವಾಗಿರಲಿದೆ.

ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲೂಕುಗಳಿರಲಿದೆ. ಬಳ್ಳಾರಿ ಜಿಲ್ಲಾ ಕೇಂದ್ರವಾಗಿ ಮುಂದುವರಿಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next