Advertisement
ಕ್ಷೇತ್ರ ಮರುವಿಂಗಡಣೆಯಾದ 2008ರಲ್ಲಿ ಹೊಸಪೇಟೆಯನ್ನು ವಿಜಯನಗರ ವಿಧಾನಸಭಾ ಕ್ಷೇತ್ರವನ್ನಾಗಿ ಪರಿವರ್ತಿಸಲಾಯಿತು. ಸತತ ಎರಡು ಬಾರಿ ಯಾರಿಗೂ ಗೆಲುವು ಒಲಿಯದ ಈ ಕ್ಷೇತ್ರದಲ್ಲಿ ಹಾಲಿ ಶಾಸಕ ಆನಂದ್‌ಸಿಂಗ್ 2 ಬಾರಿ ಬಿಜೆಪಿ, ಒಮ್ಮೆ ಕಾಂಗ್ರೆಸ್‌ನಿಂದ ಸತತವಾಗಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಸಾಧಿಸಿದ್ದರು. ಬಿಜೆಪಿಯಿಂದ ಗೆದ್ದ ಎರಡು ಬಾರಿ 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದ್ದ ಆನಂದ್‌ಸಿಂಗ್‌ಗೆ ಮೂರನೇ ಬಾರಿಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿದಾಗ ಕ್ಷೇತ್ರದ ಮತದಾರರು ಗೆಲುವಿನ ಅಂತರ ಕಡಿತಗೊಳಿಸಿ ಆನಂದ್‌ಸಿಂಗ್‌ಗೆ ಶಾಕ್ ನೀಡಿದರು. ಶೇ.74.04 ರಷ್ಟು ಮತದಾನವಾಗಿದ್ದು, ಕಾಂಗ್ರೆಸ್‌ನ ಆನಂದ್‌ಸಿಂಗ್, ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಎಚ್.ಆರ್.ಗವಿಯಪ್ಪರಿಗಿಂತ 8228 ಮತಗಳ ಅಂತರದಿಂದ ಗೆಲುವು ಸಾಧಿಸಿದರು. ಈ ಅಂತರವನ್ನು ಸ್ವತಃ ಆನಂದ್‌ಸಿಂಗ್ ಅವರಿಗೂ ಅರಗಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಕಳೆದ ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರದಲ್ಲಿ ಶೇ.61.25ರಷ್ಟು ಮತದಾನವಾಗಿದ್ದು, ಬಿಜೆಪಿಗಿಂತ ಕಾಂಗ್ರೆಸ್‌ಗೆ 27 ಸಾವಿರ ಲೀಡ್ ಲಭಿಸಿ ಒಂದಷ್ಟು ಸಮಾಧಾನ ಮೂಡಿಸಿತ್ತು. ಆದರೆ, ಇದೀಗ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಹೀಗೆ ಏರಿಳಿತ ಮುಂದುವರಿಯಲಿದೆಯೇ ಅಥವಾ ಮತದಾರರು ಬದಲಾವಣೆ ಬಯಸಿದ್ದಾರೆಯೇ? ಎಂಬುದು ಸದ್ಯದ ಮಟ್ಟಿಗೆ ಕುತೂಹಲ ಮೂಡಿಸಿದೆ.
Related Articles
Advertisement
ಲೋಕಸಭೆ ಸಾರ್ವತ್ರಿಕ ಚುನಾವಣೆಯ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಒಟ್ಟು 8 ಗಂಪುಗಳನ್ನು ರಚಿಸಿಕೊಂಡು ಮನೆ ಮನೆಗೆ ತೆರಳಿ ಪ್ರಚಾರ ಮಾಡಿದ್ದೇವೆ. ಪ್ರಣಾಳಿಕೆಯಲ್ಲಿ ಘೋಷಿಸಿ ನ್ಯಾಯ್ ಯೋಜನೆ ಬಗ್ಗೆ ಮತದಾರರಲ್ಲಿ ಮನವೊಲಿಸಲಾಗಿದೆ. ಇದರಿಂದ ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ 27 ಸಾವಿರ ಮತಗಳು ಲೀಡ್ ದೊರೆತಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ 15 ರಿಂದ 20 ಸಾವಿರಕ್ಕೂ ಹೆಚ್ಚು ಮತಗಳು ಕಾಂಗ್ರೆಸ್‌ಗೆ ದೊರೆಯುವ ಸಾಧ್ಯತೆಯಿದೆ.•ನಿಂಬಗಲ್ ರಾಮಕೃಷ್ಣ,
ಸಂಚಾಲಕರು, ಕಲಬುರಗಿ (ಹೈಕ) ವಿಭಾಗ, ಕೆಪಿಸಿಸಿ ಸಾಮಾಜಿಕ ಜಾಲತಾಣ. ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪರಿಗೆ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ 35 ಸಾವಿರಕ್ಕೂ ಅಧಿಕ ಮತಗಳ ಲೀಡ್ ದೊರೆಯಲಿದೆ. ಕಳೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪರಿಗೆ ಕ್ಷೇತ್ರದಲ್ಲಿ ಬಿಜೆಪಿಗಿಂತ ಅಧಿಕ 27 ಸಾವಿರ ಮತಗಳು ಲಭಿಸಿದ್ದವು. ಅವರ ಗೆಲವಿಗಾಗಿ ಘಟಾನುಘಟಿ ನಾಯಕರು ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದರು. ಹೀಗಾಗಿ ಅವರ ಗೆಲವು ಸುಲಭವಾಯಿತು. ಕಳೆದ ಉಪಚುನಾವಣೆಗೂ ಈ ಬಾರಿ ಚುನಾವಣೆಗೆ ಅಜಗಜಾಂತರ ವ್ಯತ್ಯಾಸವಿದೆ. ಈ ಚುನಾವಣೆ ಚಿತ್ರಣವೇ ಬದಲಾಗಿದೆ. ದೇಶದೆಲ್ಲೆಡೆ ಮೋದಿಯವರ ಅಲೆಯಿದೆ. ಬಲಿಷ್ಟ ರಾಷ್ಟ್ರ ನಿರ್ಮಾಣಕ್ಕಾಗಿ ಮೋದಿಯವರನ್ನು ಮತ್ತೂಮ್ಮೆ ಪ್ರಧಾನಿ ಮಾಡಲು ದೇಶದ ಪ್ರಜ್ಞಾವಂತ ಮತದಾರರು ಸಂಕಲ್ಪ ತೊಟ್ಟಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾರ್ಯಗಳು ಗೆಲುವಿಗೆ ಶ್ರೀರಕ್ಷೆಯಾಗಲಿದೆ.
•ಕಿಶೋರ್ ಪತ್ತಿಕೊಂಡ,
ಬಿಜೆಪಿ ಮುಖಂಡ, ವಿಜಯನಗರ ಕ್ಷೇತ್ರ. ವೆಂಕೋಬಿ ಸಂಗನಕಲ್ಲು