Advertisement

ಜಿಲ್ಲೆ ವಿಭಜನೆ ಖಂಡಿಸಿ ಕಾನೂನು ಹೋರಾಟ  

03:55 PM Feb 10, 2021 | Team Udayavani |

ಬಳ್ಳಾರಿ: ಜಿಲ್ಲೆಯ ವಿಭಜನೆಗೆ ಆಕ್ಷೇಪಣೆ ಸಲ್ಲಿಸಿದರೂ ಅಧಿಕಾರ ದುರುಪಯೋಗ ಪಡಿಸಿಕೊಂಡು ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನಾಗಿ ಘೋಷಿಸಿ ಸರ್ಕಾರ ಅ ಧಿಕೃತಗೊಳಿಸಿದೆ. ಆದರೂ ನಮ್ಮ ಹೋರಾಟ ಇಲ್ಲಿಗೆ ನಿಲ್ಲದೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯ ಕುಡತಿನಿ ಶ್ರೀನಿವಾಸ್‌ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಳ್ಳಾರಿಯನ್ನು ಅಖಂಡವಾಗಿ ಮುಂದುವರೆಸಬೇಕು ಎಂದು ಕಳೆದ ಒಂದು ವರ್ಷದಿಂದ ಹೋರಾಟ ಹಮ್ಮಿಕೊಳ್ಳಲಾಗುತ್ತಿದೆ. ಜಿಲ್ಲೆ ವಿಭಜನೆ ವಿರೋಧಿಸಿ ಬಳ್ಳಾರಿ ಬಂದ್‌ ಸೇರಿ ಸರ್ಕಾರಕ್ಕೆ ಸಾವಿರಾರು ಆಕ್ಷೇಪಣೆಗಳನ್ನು ಸಹ ಸಲ್ಲಿಸಿದ್ದೇವೆ. ಆದರೂ, ನಮ್ಮ ಆಕ್ಷೇಪಣೆಗಳನ್ನು ಸಮರ್ಪಕವಾಗಿ ಪರಿಗಣಿಸದ ರಾಜ್ಯ ಸರ್ಕಾರ ಅ ಕಾರವನ್ನು ದುರುಪಯೋಗ ಪಡಿಸಿಕೊಂಡು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ, ಪ್ರತ್ಯೇಕ ವಿಜಯನಗರ ಜಿಲ್ಲೆಯನ್ನು ಘೋಷಿಸಿ ಅಧಿಕೃತಗೊಳಿಸಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದ್ದು, ಮದ್ರಾಸ್‌ ಆಡಳಿತ ಅವಧಿ ಯಲ್ಲಿನ ಜಿಲ್ಲೆಗೆ ಸಂಬಂಧಿಸಿದ ದಾಖಲೆಗಳ ಸಂಗ್ರಹಿಸಲಾಗುತ್ತಿದೆ. ಇನ್ನೆರಡೂ¾ರು ದಿನಗಳಲ್ಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದವರು ಸ್ಪಷ್ಟಪಡಿಸಿದರು.

ಸಮಿತಿಯ ದರೂರು ಪುರುಷೋತ್ತಮಗೌಡ ಮಾತನಾಡಿ, ಬಳ್ಳಾರಿ ಜಿಲ್ಲೆಯನ್ನು ವಿಭಜಿಸುವುದಾದರೆ ಜಿಲ್ಲಾ ಕೇಂದ್ರವನ್ನು ಭೌಗೋಳಿಕವಾಗಿ ಪಶ್ಚಿಮ ತಾಲೂಕನ್ನೇ ಗುರುತಿಸಬೇಕು. ಪ್ರಸ್ತುತ ದಿನಗಳಲ್ಲಿ ಸರ್ಕಾರಗಳು ಯಾವಾಗಲಾದರೂ ಬದಲಾವಣೆಯಾಗಬಹುದು. ಹಾಗೇನಾದರೂ ಆದರೆ, ವಿಜಯನಗರ ಜಿಲ್ಲಾ ಕೇಂದ್ರವನ್ನು ಪಶ್ಚಿಮ ತಾಲೂಕುಗಳಿಗೆ ನೀಡಿ, ಹೊಸಪೇಟೆಯನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿಕೊಳ್ಳಲಾಗುವುದು ಎಂದವರು ತಿಳಿಸಿದರು.

ಇದನ್ನೂ ಓದಿ :ವಿಜಯನಗರ ಜಿಲ್ಲೆ ಘೋಷಣೆಗೆ ವಿಜಯೋತ್ಸವ

ಬಳಿಕ ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಸಮಿತಿಯ ಸದಸ್ಯರೆಲ್ಲರೂ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪ್ರತಿಕೃತಿ ದಹಿಸಿ ಕರಾಳ ದಿನವನ್ನು ಆಚರಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಅರ್ಥಕಿಂಗ್‌ ಜಗದೀಶ್‌, ಸಿದ್ಮಲ್‌ ಮಂಜುನಾಥ್‌, ಬಂಡೆಗೌಡ, ಸಿಂಗಾಪುರ ನಾಗರಾಜ್‌ ಸೇರಿ ಹಲವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next