ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಮೆಹಜಬಿನ್ ಹೋರ್ತಿ ಹಾಗೂ ಬಿಜೆಪಿ ಪಕ್ಷದಿಂದ ರಶ್ಮಿ ಕೋರಿ ನಾಮಪತ್ರ ಸಲಿಸಿದ್ದಾರೆ.
ಮಂಗಳವಾರ ಮೇಯರ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಚುನಾವಣಾ ಅಧಿಕಾರಿಗಳಾದ ಬೆಳಗಾವಿ ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಉಪ ಮೇಯರ್ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಮೀಸಲಿದೆ. ಪಾಲಿಕೆಯ 35 ಸದಸ್ಯರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಈ ಸಮುದಾಯಕ್ಕೆ ಸೇರಿದ ಏಕೈಕ ಸದಸ್ಯ ಇದ್ದು, ಪ.ಪಂ.ಕ್ಕೆ ಸೇರಿದ ದಿನೇಶ ಹಳ್ಳಿ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ.
ಹೀಗಾಗಿ ಉಪ ಮೇಯರ್ ಆಗಿ ದಿನೇಶ ಆಯ್ಕೆ ಖಚಿತವಾಗಿದ್ದು, ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ನ ಮೆಹಜಮಿನ್ ಹಾಗೂ ಬಿಜೆಪಿ ಪಕ್ಷದ ರಶ್ಮಿ ಇವರಲ್ಲಿ ಯಾರೂ ನಾಮಪತ್ರ ಹಿಂಪಡೆಯದಿದ್ದರೆ ಇಬ್ಬರ ಮಧ್ಯೆ ಪೈಪೋಟಿ ನಿರೀಕ್ಷೆ ಇದೆ
ಇದನ್ನೂ ಓದಿ: 4 ವರ್ಷದ ಮಗುವನ್ನು ಕೊಂದು ಬ್ಯಾಗ್ ನಲ್ಲಿ ಕೊಂಡೊಯ್ಯುತ್ತಿದ್ದ ಸಿಇಒ ಸುಚನಾ ಬಂಧನ