Advertisement

Vijayapur: ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಿಕೆ

07:54 PM Oct 27, 2023 | Pranav MS |
ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಗೆ ಅ.30 ರಂದು ನಿಗದಿಯಾಗಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ವಿಜಯಪುರ ಮಹಾನಗರ ಪಾಲಿಕೆ ಅಧ್ಯಕ್ಷಾಧಿಕಾರಿಗಳಾದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್.ಬಿ.ಶೆಟ್ಟೆಣವರ, ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಹಾಪೌರ ಸ್ಥಾನಗಳ ಮೀಸಲಾತಿ ಪ್ರಶ್ನಿಸಿ ಕಲಬುರಗಿ ಉಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ದಾಖಲಾದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ದಿ.27-10-2023 ರಂದು ಪ್ರಕರಣದ ವಿಚಾರಣೆ ನಡೆಸಿದ ಉಚ್ಛ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ದಿ.30-10-2023 ರಂದು ಮುಂದೂಡಿದೆ.
ಈ ಹಿನ್ನಲೆಯಲ್ಲಿ ನ್ಯಾಯಾಲಯದಲ್ಲಿರುವ ಪ್ರಕರಣ ಇತ್ಯರ್ಥವಾಗುವ ವರೆಗೆ ಚುನಾವಣೆ ನಡೆಸಲು ಯಾವುದೇ ಕ್ರಮ ತೆಗೆದುಕೊಳ್ಳದಂತೆ ಕಲುಬುರಗಿ ಪೀಠದ ಹೆಚ್ಚುವರಿ ಅಡ್ವೋಕೆಟ್ ಜನರಲ್ ಇವರು ತಿಳಿಸಿರುವುದರಿಂದ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next