Advertisement

Vijayapura: ಪಾದಚಾರಿಗಳ ಮೇಲೆ ಹರಿದ ಬೈಕ್, ನಾಲ್ವರು ಸಾವು, ನಾಲ್ವರಿಗೆ ಗಂಭೀರ ಗಾಯ

09:41 AM Sep 06, 2024 | Kavyashree |

ವಿಜಯಪುರ: ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಗಳ ಮೇಲೆ ಬೈಕ್ ಹರಿದು ನಾಲ್ವರು ಸಾವಿಗೀಡಾಗಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಜಿಲ್ಲೆಯ ಕುಂಟೋಜಿ ಗ್ರಾಮದಲ್ಲಿ ಸೆ.6ರ ಶುಕ್ರವಾರ ನಡೆದಿದೆ.

Advertisement

ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ನಿಂಗರಾಜ ಚೌಧರಿ (22), ಹಿಂಬದಿ ಸವಾರ ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ಅನೀಲ ಖೈನೂರ (23) ಹಾಗೂ ರಸ್ತೆ ಬದಿ ನಿಂತಿದ್ದ ಮುದ್ದೇಬಿಹಾಳ ತಾಲೂಕಿನ ಮಲಗಲದಿನ್ನಿ ಗ್ರಾಮದ ಉದಯಕುಮಾರ ಪ್ಯಾಟಿ (19) ಹಾಗೂ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ರಾಯಪ್ಪ ಬಾಗೇವಾಡಿ (24) ಮೃತಪಟ್ಟವರೆಂದು ಗುರುತಿಸಲಾಗಿದೆ.

ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದ್ದು, ಬೈಕ್ ಚಾಲನೆ ಮಾಡುತ್ತಿದ್ದವ ವೇಗವಾಗಿ ಚಾಲನೆ ಮಾಡಿದ್ದರಿಂದ ರಸ್ತೆ‌ಬದಿ‌ ನಿಂತಿದ್ದವರ ಮೇಲೆ ಬೈಕ್ ಹರಿದಿದೆ. ಈ ಪರಿಣಾಮ ಅವಘಡ ಸಂಭವಿಸಿದೆ.

ಶಾಹೀದ ಹುನಗುಂದ, ಪ್ರಶಾಂತ ಕುರುಬಗೌಡರ, ಹನುಮಂತ ಕುರುಬಗೌಡರ ಗಾಯಗೊಂಡವರು. ಗಂಭೀರ ಗಾಯಗೊಂಡಿರುವ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಘಟನೆಯ ಮಾಹಿತಿ ತಿಳಿಯುತ್ತಲೇ ಮುದ್ದೇಬಿಹಾಳ ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next