Advertisement

ವಿಜಯಪುರ: ಬಸ್-ಲಾರಿ ಢಿಕ್ಕಿ: ವಿದ್ಯಾರ್ಥಿನಿ, ಚಾಲಕ ಸಾವು; 24 ಜನ ಆಸ್ಪತ್ರೆಗೆ ದಾಖಲು

05:04 PM Jun 16, 2022 | Team Udayavani |

ವಿಜಯಪುರ : ಲಾರಿ ಹಾಗೂ ಸಾರಿಗೆ ಸಂಸ್ಥೆಯ ಬಸ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಹಾಗೂ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 24 ಜನರು ಗಾಯಗೊಂಡಿರುವ ಭೀಕರ ಅಪಘಾತ ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.

Advertisement

ಜತ್ತ್ ನಿಂದ ವಿಜಯಪುರಕ್ಕೆ ಹೊರಟಿದ್ದ ಲಾರಿ ಹಾಗೂ ವಿಜಯಪುರ ನಗರದಿಂದ ತಿಕೋಟಾ ತಾಲೂಕಿನ ಕನಮಡಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಮಧ್ಯೆ ಮುಖಾಮುಖಿ ಸಂಭವಿಸಿದೆ.

ಸಾರಿಗೆ ಸಂಸ್ಥೆಯ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರ ನಗರದ ನಿವಾಸಿಯಾದ 18 ವರ್ಷದ ವಿದ್ಯಾರ್ಥಿನಿ ಶ್ರದ್ಧಾ ಶಿವಾನಂದ ಬಡಿಗೇರ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಲಾರಿ ಚಾಲಕ ತಮಿಳುನಾಡು ಮೂಲದ ಬಾಬುವೆಂಕಟೇಶ ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವ ಇತರೆ 24 ಜನರನ್ನು ವಿಜಯಪುರ ನಗರದಲ್ಲಿರುವ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತ ಸಂಭವಿಸಿದ ಬಳಿಕ ತುರ್ತು ಮಾಹಿತಿ ನೀಡಿದರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್ ತಡವಾಗಿ ಆಗಮಿಸಿದೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next