Advertisement

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

10:55 AM Nov 26, 2024 | sudhir |

ವಿಜಯಪುರ: ಮಹಾನಗರ ಪಾಲಿಕೆಯ ವಾರ್ಡ್ ನಂ.29ಕ್ಕೆ ನಡೆದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗಿರೀಶ ವಿಜಯಕುಮಾರ ಪಾಟೀಲ ಗೆಲುವು ಸಾಧಿಸಿದ್ದಾರೆ.

Advertisement

ವಾರ್ಡ್‌ ನಂ.29ರ ಸದಸ್ಯರಾಗಿದ್ದ ಬಿಜೆಪಿಯ ವಿಜಯಕುಮಾರ ಬಿರಾದಾರ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕಾರಣಕ್ಕೆ ಶನಿವಾರ ಉಪಚುನಾವಣೆ ನಡೆದಿತ್ತು.

ಒಟ್ಟು 9,861 ಮತದಾರರ ಪೈಕಿ ಶೇ.46.18ರಷ್ಟು ಮಾತ್ರ ಮತದಾನವಾಗಿತ್ತು. ಇಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬಂದಿದ್ದು, ವಿಜಯಕುಮಾರ ಅವರ ಪುತ್ರ ಗಿರೀಶ ಬಿರಾದಾರ ಗೆಲುವು ದಕ್ಕಿಸಿಕೊಂಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಗಿರೀಶ 2,754 ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಭಾಗಪ್ಪ ಏಳಗಂಟಿ 1,762 ಮತಗಳನ್ನು ಪಡೆದಿದ್ದು, 38 ನೋಟಾ ಮತಗಳು ಚಲಾವಣೆಯಾಗಿವೆ ಎಂದು ಉಪ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಗೆ ಹಿನ್ನಡೆ: ಪಾಲಿಕೆಯಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿತ್ತು. ಹೀಗಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಏಳಗಂಟಿ ಅವರನ್ನು ಕಾಂಗ್ರೆಸ್ ಸೆಳೆದು ಕಣಕ್ಕಿಳಿಸಿ ಭಾರೀ ಪೈಪೋಟಿ ಒಡ್ಡಿತ್ತು.

Advertisement

ಮತ್ತೊಂದಡೆ, ಬಿಜೆಪಿ ಅಭ್ಯರ್ಥಿಯ ಪರವಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎರಡು ದಿನಗಳ ಕಾಲ ಪ್ರಚಾರ ನಡೆಸಿದ್ದರು. ವಾರ್ಡ್‌ ಅನ್ನು ವಶಕ್ಕೆ ಪಡೆದು ಪಾಲಿಕೆಯಲ್ಲಿ ತಮ್ಮ ಸಂಖ್ಯಾಬಲವನ್ನು ವೃದ್ಧಿಸಿಕೊಳ್ಳಲು ಎರಡೂ ಪಕ್ಷಗಳು ಸಮಬಲದ ಹೋರಾಟ ನಡೆಸಿದ್ದವು. ಆದರೆ, ಉಪ ಚುನಾವಣೆಯಲ್ಲಿ ಸೋಲಿನ ಮೂಲಕ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.

ಮಹಾನಗರ ಪಾಲಿಕೆಯು 35 ಸ್ಥಾನಗಳನ್ನು ಹೊಂದಿದೆ. ಸದ್ಯ ಬಿಜೆಪಿ 16, ಕಾಂಗ್ರೆಸ್ 10, ಜೆಡಿಎಸ್ 1, ಎಐಎಂಐಎಂ 2 ಹಾಗೂ  ಪಕ್ಷೇತರ 5 ಸದಸ್ಯರಿದ್ದಾರೆ. ಜೆಡಿಎಸ್, ಎಐಎಂಐಎಂ ಹಾಗೂ ಪಕ್ಷೇತರ ಸದಸ್ಯರ ಬೆಂಬಲದೊಂದಿಗೆ ಕಾಂಗ್ರೆಸ್‌ ಅಧಿಕಾರದ ಗದ್ದುಗೆಯಲ್ಲಿ ಇದೆ.

ಇದನ್ನೂ ಓದಿ: By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Advertisement

Udayavani is now on Telegram. Click here to join our channel and stay updated with the latest news.

Next