ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಕೆಪಿಎಸ್ ಶಾಲೆಯ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕರ ಮೇಲೆ ಶಿಸ್ತು ಕ್ರಮ ಜರುಗಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಎಚ್.ನಾಗೂರ, ಜಿಲ್ಲೆಯ ರಕ್ಕಸಗಿ ಗ್ರಾಮದ ಪಿಕೆಎಸ್ ಶಾಲೆಯ ಮುಖ್ಯೋಪಾದ್ಯಾಯ ಎಸ್.ಟಿ.ದೊಡಮನಿ ಮೇಲೆ ಶಿಸ್ತು ಕ್ರಮ ಜರುಗಿಸಲಾಗಿದೆ.
ರುಚಿ ಶುಚಿ ಪರಿಶೀಲನೆ ಮಾಡಿದ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.
ರುಚಿ ಶುಚಿ ಪರಿಶೀಲನೆ ಮಾಡಿದ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.
ಜಿ.ಪಂ. ಸಿಇಒ ಅವರ ಸೂಚನೆ ಮೇರೆಗೆ ರಕ್ಕಸಗಿ ಶಾಲೆಯ ಘಟನೆ ಕುರಿತು ಇಲಾಖೆಯ ತಂಡವು ಕೆಪಿಎಸ್ ಪ್ರೌಢಶಾಲೆ, ಕಸ್ತೂರಬಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಿದೆ.
ವರದಿಯ ಅನ್ವಯ ಸದರಿ ಶಾಲೆಯ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳಿಗೆ ಕುಡಿಯಲು, ಆಹಾರ ತಯಾರಿಕೆಗೆ ಬಳಸುವುದಕ್ಕಾಗಿ ಶುದ್ಧ ನೀರು ಒದಗಿಸುವಲ್ಲಿ ನಿರ್ಲಕ್ಷ ಮಾಡಿದ್ದಾರೆ. ಅಲ್ಲದೇ ಅಡುಗೆ ಸಿಬ್ಬಂದಿಗೆ ಸರಿಯಾದ ಮಾರ್ಗದರ್ಶನ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಹೀಗಾಗಿ ಸಂಬಂಧಿಸಿದ ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ಇದಲ್ಲದೇ ರುಚಿ ಶುಚಿ ಪರಿಶೀಲನೆ ಮಾಡಿದ ಶಿಕ್ಷಕ ಎಚ್.ಡಿ.ಬಂಡಿವಡ್ಡರ ಹಾಗೂ ಸುಭಾಶ ಮಾದರ ವಿರುದ್ಧ ನಿರ್ಲಕ್ಷ್ಯದ ಕಾರಣ ಕೇಳಿ ನೋಟಿಸ್ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.