ವಿಜಯಪುರ: ನಾಡಿನ ಪ್ರತಿಷ್ಠಿತ ಆಲಮಟ್ಟಿಯ ಲಾಲ್ ಬಹಾದ್ದೂರ ಶಾಸ್ತ್ರೀ ಸಾಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದರು.
ಆಲಮಟ್ಟಿ ಜಲಾಶಯ ಭರ್ತಿಯಾದ ಪ್ರಯುಕ್ತ ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಸಹಯೋಗದಲ್ಲಿ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕ್ಕೊಲಾಗಿದ್ದು, ಜಲಾಶಯ ಮತ್ತು ಉದ್ಯಾನವನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ.
ಬಾಗಿನ ಅರ್ಪಣೆಗೂ ಮುನ್ನ ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್ ಇಲಾಖೆಯಿಂದ ಸಿಎಂ ಗೌರವ ವಂದನೆ ಸ್ವೀಕರಿಸಿದರು.
ಸಮಾರಂಭದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ , ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: Bidar: ಅಮೆಜಾನ್ ಕಚೇರಿಗೆ ನುಗ್ಗಿ ಡೆಲಿವರಿ ಬಾಯ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ತಂಡ