ವಿಜಯಪುರ: ಇಲ್ಲಿನ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ರಂದು ಮತದಾನ ನಡೆಯುತ್ತಿದ್ದು, ಶಾಂತಿಯುತ ಮತದಾನ ಮುಂದುವರೆದಿದೆ.
ವಿಜಯಪುರ ಜಿಲ್ಲಾ ಚುನಾವಣೆ ಅಧಿಕಾರಿಯಾದ ಜಿಲ್ಲಾಧಿಕಾರಿ ಡಾ.ವಿ.ಬಿ. ದಾನಮ್ಮನವರ ತಮ್ಮ ಪತ್ನಿ ಶ್ವೇತಾ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ, ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.
ನಗರದ ವಿ.ಬಿ.ದರಬಾರ ಶಾಲೆಯಲ್ಲಿ ಸ್ಥಾಪಿಲಾಗಿರುವ 219 ರ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ತಮ್ಮ ಮತದಾನ ಹಕ್ಕು ಚಲಾಯಿಸಿದರು.
ಇದನ್ನೂ ಓದಿ:ಮೇಯರ್ ಸೂಚನೆ ; 3 ವರ್ಷಗಳಿಂದ ಹಾಕಲಾದ ಕಲ್ಲು, ಮಣ್ಣಿನ ರಾಶಿ ತೆರವುಗೊಳಿಸಿದ ಇಲಾಖೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಚುನಾವಣೆ ಮೂಲಕ ಪವಿತ್ರವಾದ ಮತದಾನ ಹಕ್ಕು ಚಲಾಯಿಸಿ, ಅರ್ಹರ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ ಎಂದರು.
ಪ್ರತಿಯೊಂದು ಮತವೂ ಮೌಲಿಕವಾಗಿದ್ದು, ನಮ್ಮ ಮತ ಪ್ರಗತಿಗೆ ಬರೆಯುವ ಮುನ್ನುಡಿ. ಹೀಗಾಗಿ ಉತ್ತಮ ಜನಪ್ರತಿನಿಧಿ ಆಯ್ಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯೂ ಹೌದು ಎಂದರು.