Advertisement

ವಿಜಯಪುರ ಕೋವಿಡ್ ಮಹಾ ಸ್ಫೋಟ : ಮತ್ತೆ 39 ಜನರಿಗೆ ಸೋಂಕು

08:25 PM Jul 02, 2020 | sudhir |

ವಿಜಯಪುರ : ಜಿಲ್ಲೆಯಲ್ಲಿ ಕೋವಿಡ್  ಮಹಾಸ್ಫೋಟ ಮುಮದುವರೆದಿದ್ದು, ಗುರುವಾರ ಮತ್ತೆ 39 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಅಲ್ಲಿಗೆ ವಿಜಯಪುರ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 466ಕ್ಕೆ ಏರಿಕೆಯಾಗಿದೆ.

Advertisement

ಜಿಲ್ಲೆಯಲ್ಲಿ ಗುರುವಾರದ ವರೆಗೆ 466 ಸೋಂಕಿತರು ಪತ್ತೆಯಾಗಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಗುರುವಾರ 14 ರೋಗಿಗಳು ಸೋಂಕು ಮುಕ್ತರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಮರಳಿದವರ ಸಂಖ್ಯೆ 322 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಈ ವರೆಗೆ 9 ಜನರು ಮೃತಪಟ್ಟಿದ್ದು, ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 135 ಸೋಂಕಿತರಿಗೆ ಚಿಕಿತ್ಸೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next