Advertisement

ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಾಗೃತಿ ಜಾಥಾ

06:08 PM Jun 19, 2020 | Naveen |

ವಿಜಯಪುರ: ಕೋವಿಡ್‌-19 ಹರಡುವಿಕೆ ನಿಗ್ರಹಕ್ಕಾಗಿ ಸಾರ್ವಜನಿಕರಲ್ಲಿ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಲು ಸರ್ಕಾರದ ಸೂಚನೆಯಂತೆ ಗುರುವಾರ ನಗರದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಯಿತು.

Advertisement

ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಡಿಸಿ, ಸಾಂಕ್ರಾಮಿಕ ರೋಗವಾಗಿರುವ ಕೋವಿಡ್‌ -19 ಕೋವಿಡ್‌ ರೋಗಕ್ಕೆ ನಿರ್ದಿಷ್ಟ ಔಷಧ ಇಲ್ಲ. ಹೀಗಾಗಿ ರೋಗ ಹರಡದಂತೆ ಹಾಗೂ ರೋಗ ಬಾಧಿಸದಂತೆ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸುವುದು, ಕೈಗಳಿಗೆ ಸ್ಯಾನಿಟೈಸರ್‌ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೋಗ ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್‌ ಅಗರವಾಲ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಡಿಎಚ್‌ಒ ಡಾ|ಮಹೇಂದ್ರ ಕಾಪ್ಸೆ, ಜಿಲ್ಲಾಸ್ಪತ್ರೆ ಸರ್ಜನ್‌ ಡಾ| ಶರಣಪ್ಪ ಕಟ್ಟಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಎಂ.ಬಿ. ಬಿರಾದಾರ, ಡಾ| ಧಾರವಾಡಕರ, ಡಾ| ಸಂಪತ್‌ಕುಮಾರ ಗುಣಾರೆ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next