Advertisement

ಕೋವಿಡ್‌ ಲಕ್ಷಣ ಇದ್ದವರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ

05:10 PM Jun 25, 2020 | Naveen |

ವಿಜಯಪುರ: ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ತೊಂದರೆಯಂತ ಕೋವಿಡ್‌ ಲಕ್ಷಣಗಳ ಇರುವವರು ತಕ್ಷಣ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು. ಅಲ್ಲದೇ ಈ ಕುರಿತು ಮಾಹಿತಿ ಪಡೆಯಲು ಆಗಮಿಸುವ ಆರೋಗ್ಯ ಇಲಾಖೆ, ಆಶಾ ಕಾರ್ಯಕಾರ್ಯರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದರು.

Advertisement

ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಕಾಲೋನಿಗಳ ಮುಖಂಡರ ಸಭೆಯಲ್ಲಿ ಈ ಮನವಿ ಮಾಡಿದ ಅವರು, ಕೋವಿಡ್‌-19 ಪಾಸಿಟಿವ್‌ ಪ್ರಕರಣ ದೃಢಪಟ್ಟ ಪ್ರದೇಶಗಳಲ್ಲಿ ಸೀಲ್‌ಡೌನ್‌ ಮಾಡಲಾಗಿದೆ. ಆಯಾ ಪ್ರದೇಶದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆರು ಆಗಮಿಸಿ ವಿವರಗಳನ್ನು ಪಡೆಯಲಿದ್ದಾರೆ. ನೆಗಡಿ, ಕೆಮ್ಮು, ಜ್ವರ ಹಾಗೂ ತೀವ್ರ ಉಸಿರಾಟ ಸಂಬಂಧಿತ ತೊಂದರೆ ಮಾತ್ರವಲ್ಲ ಮನೆಯ ಎಲ್ಲ ಸದಸ್ಯರ ಮಾಹಿತಿ ಪಡೆಯಲಿದ್ದಾರೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ತಿಳಿಸಿದರು.

ಮಾಹಿತಿ ಪಡೆಯಲು ಆಗಮಿಸುವ ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರೊಂದಿಗೆ ಅನುಚಿತವಾಗಿ ನಡೆದುಕೊಂಡಲ್ಲಿ ಕಾನೂನಿನ ರಿತ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸೀಲ್‌ಡೌನ್‌ ಮಾಡಲಾಗಿರುವ ಪ್ರದೇಶಗಳಲ್ಲಿ ಬಡವರಿಗೆ ಆಹಾರ ತೊಂದರೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಯಾವುದೇ ಸಮಸ್ಯೆ ಕಂಡು ಬಂದಲ್ಲಿ ಸ್ಥಳೀಯ ಮುಖಂಡರು ಸಾರ್ವಜನಿಕರಿಗೆ ತಿಳಿಹೇಳುವ ಕಾರ್ಯ ಮಾಡಬೇಕು ಕೋರಿದರು. ಅಲ್ಲಿನ ಮುಖಂಡರು ಸಾರ್ವಜನಿಕರಲ್ಲಿ ತಿಳಿಹೇಳಬೇಕು. ಆ ವಲಯದಲ್ಲಿ ಸಮಿತಿ ರಚಿಸಿಕೊಂಡು ಆರೋಗ್ಯ ಇಲಾಖೆಗೆ ಸಹಕರಿಸುವಂತೆ ತಿಳಿಸಿದರು. ಡಾ| ಔದ್ರಾಮ್‌, ಡಾ| ಮುಕುಂದ ಗಲಗಲಿ, ಎಂ.ಬಿ. ಬಿರಾದಾರ, ಡಾ| ಕವಿತಾ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next