Advertisement

ವಿಜಯಪುರ 144 ಜನರಿಗೆ ಸೋಂಕು ದೃಢ! ಓರ್ವ ಸಾವು

09:35 PM Aug 08, 2020 | sudhir |

ವಿಜಯಪುರ : ಜಿಲ್ಲೆಯಲ್ಲಿ ಬಿಡುಗಡೆಯಾದ ಕೋವಿಡ್ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 144 ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3706 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸೋಂಕಿತ ರೋಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Advertisement

ಶನಿವಾರ ಜಿಲ್ಲಾಡಳಿತ ಮಾಧ್ಯಮಗಳಿಗೆ ಬಿಡುಗಡೆ ಆಗಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 144 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3706 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ ಮತ್ತೆ 167 ಜನರು ಗುಣಮುಖರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಈ ವರೆಗೆ 2691 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ 974 ಸೋಂಕಿತರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯ ಸೋಂಕಿತರಲ್ಲಿ ಓರ್ವ ರೋಗಿ ಮೃತಪಟ್ಟಿದ್ದು, ಮೃತರ ಸಂಖ್ಯೆ 41 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಸಿಂದಗಿ ಉರ್ದು ಶಾಲೆ ಹಿಂದಿನ ಕಂಟೇನ್ಮೆಂಟ್ ವಲಯದ ನಿವಾಸಿ ಕೋವಿಡ್ ಸೋಂಕಿತ 55 ವರ್ಷದ ಪಿ167277 ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

Advertisement

ತೀವ್ರ ಶ್ವಾಸಕೋಶ ತೊಂದರೆ, ರಕ್ತದ ಒತ್ತಡ, ಸಕ್ಕರೆ ಕಾಯಿಲೆಗಳಿಂದ ಬಳಲುತ್ತಿದ್ದರು. ಹೋಮ ಐಸೋಲೇಶನ್ ನಿಗಾದಲ್ಲಿದ್ದ ಸದರಿ ರೋಗಿ ದಿನಾಂಕ 6-8-20ರಂದು ರ್ಯಪಿಡ್ ಆಂಟಿಜನ್ ಪರೀಕ್ಷೆ ನಡೆಸಿದಾಗ ಕೋವಿಡ್ ಸೋಂಕು ದೃಢಪಟ್ಟಿದೆ.

ತೀವ್ರ ಕಾಯಿಲೆಗಳಿಂದ ಬಳಲುತ್ತಿದ್ದ ಸೋಂಕಿತನನ್ನು ಆಸ್ಪತ್ರೆಗೆ ಸಾಗಿಸುವ ಮುನ್ನ ಆ. 7 ರಂದು ಮನೆಯಲ್ಲೇ ಮೃತಪಟ್ಟಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಶಿಷ್ಠಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next