Advertisement

ವಿಜಯಪುರ: ಕೋವಿಡ್ ಸೋಂಕಿಗೆ ಮೂವರು ಸಾವು! 64 ಹೊಸ ಪ್ರಕರಣ ಪತ್ತೆ

02:42 PM Aug 18, 2020 | sudhir |

ವಿಜಯಪುರ : ಜಿಲ್ಲೆಯಲ್ಲಿ ಮಂಗಳವಾರ ಬಿಡುಗಡೆಯಾದ ಕೋವಿಡ್ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 64ಜನರಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5040 ಕ್ಕೆ ಏರಿಕೆಯಾಗಿದೆ. ಮತ್ತೊಂದೆಡೆ ಸೋಂಕಿತರಲ್ಲಿ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.

Advertisement

ಮಂಗಳವಾರ ಮಾಧ್ಯಮಗಳಿಗೆ ಬಿಡುಗಡೆಯಾದ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 64 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5040 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 220 ಜನರು ರೋಗಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಇದರೊಂದಿಗೆ ಮನೆಗೆ ಮರಳಿದವರ ಸಂಖ್ಯೆ 4163 ಕ್ಕೆ ಏರಿದೆ. ಸದ್ಯ ಜಿಲ್ಲೆಯ ಆಸ್ಪತ್ರೆಗಳಲ್ಲಿ 817 ರೋಗಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಇನ್ನು ಸೋಂಕಿತರಲ್ಲಿ ಮತ್ತೆ ಮೂವರು ಮೃತಪಟ್ಟಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next