Advertisement

ವಿಜಯಪುರ ಜಿಲ್ಲೆಯಲ್ಲಿ ಕೋವಿಡ್‍ಗೆ 4 ಮಂದಿ ಸಾವು! 140 ಮಂದಿಯಲ್ಲಿ ಸೋಂಕು ದೃಢ

09:43 PM Aug 29, 2020 | sudhir |

ವಿಜಯಪುರ : ಜಿಲ್ಲೆಯಲ್ಲಿ ಶನಿವಾರ ಬಿಡುಗಡೆಯಾದ ಕೋವಿಡ್ ವರದಿಯಲ್ಲಿ ಜಿಲ್ಲೆಯಲ್ಲಿ ಮತ್ತೆ 140 ಜನರಿಗೆ ಸೋಂಕು ದೃಢಪಟ್ಟಿದೆ.

Advertisement

ಮತ್ತೊಂದೆಡೆ ಸೋಂಕಿತರಲ್ಲಿ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 99 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಬಸವ ನಾಡಿನಾಡಿಲ್ಲಿ ಕೋವಿಡ್ ಕಾರಣದಿಂದ ಸಾವಿಗೀಡಾದವರ ಸಂಖ್ಯೆ ಶತಕದ ಗಡಿಗೆ ಬಂದು ನಿಂತಿದೆ.

ಶನಿವಾರ ಮಾಧ್ಯಮಗಳಿಗೆ ಬಿಡುಗಡೆಯಾದ ವರದಿಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ 140 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6472 ಕ್ಕೆ ಏರಿಕೆಯಾಗಿದೆ. ಸೋಂಕಿತರಲ್ಲಿ ಮತ್ತೆ 86 ಜನರು ಗುಣಮುಖರಾಗಿ ಮನೆಗೆ ಮರಳಿದ್ದು, ಇದರೊಂದಿಗೆ ಈ ವರೆಗೆ 5517 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಸದ್ಯ 856 ಸೋಂಕಿತರು ಜಿಲ್ಲೆಯ ಕೋವಿಡ್ ವಿವಿಧ ವ್ಯವಸ್ಥೆಯ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಸೋಂಕಿತರಲ್ಲಿ ಮತ್ತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 99ಕ್ಕೆ ಏರಿಕೆಯಾಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next