Advertisement

ಸೋಂಕು-247ಕ್ಕೇರಿದ ಕೋವಿಡ್ ಸೋಂಕಿತರ ಸಂಖ್ಯೆ

11:46 AM Jun 21, 2020 | Naveen |

ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಮತ್ತೆ 9 ಜನರಲ್ಲಿ ಕೋವಿಡ್‌-19 ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 247ಕ್ಕೆ ಏರಿಕೆಯಾಗಿದೆ. ಇದಲ್ಲದೇ ಸೋಕಿಗೆ ಸೂಕ್ತ ಚಿಕಿತ್ಸೆ ಫಲವಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 211 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಹೀಗಾಗಿ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 29 ರೋಗಿಗಳು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಶನಿವಾರ ಜಿಲ್ಲೆಯ ಕೋವಿಡ್‌ ಸ್ಥಿತಿಗತಿ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಸೋಂಕು ದೃಢಪಟ್ಟವರನ್ನು 23 ವರ್ಷದ ಮಹಿಳೆ ಪಿ8302, 35 ವರ್ಷದ ಮಹಿಳೆ ಪಿ8309, ಮಹಾರಾಷ್ಟ್ರ ಸಂಪರ್ಕದಿಂದ ಸೋಂಕು ದೃಢಪಟ್ಟಿರುವ 44 ವರ್ಷದ ವ್ಯಕ್ತಿ ಪಿ8310, ಬಿಹಾರ ರಾಜ್ಯದ ಸಂಪರ್ಕದಿಂದ ಸೋಂಕು ದೃಢಪಟ್ಟಿರುವ 4 ವರ್ಷ ಬಾಲಕಿ ಪಿ8303, 42 ವರ್ಷದ ಮಹಿಳೆ ಪಿ8304, 59 ವರ್ಷದ ವ್ಯಕ್ತಿ ಪಿ8305, 17 ವರ್ಷದ ಯುವತಿ ಪಿ8306, 36 ವರ್ಷದ ವ್ಯಕ್ತಿ ಪಿ8307, 27 ವರ್ಷದ ವ್ಯಕ್ತಿ ಪಿ8308 ಎಂದು ಗುರುತಿಸಲಾಗಿದೆ.

ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 31561 ಜನರು ಆಗಮಿಸಿದ್ದು, ಒಟ್ಟು 10825 ಜನರು 28 ದಿನದ ಐಸೋಲೇಷನ್‌ ಅವಧಿ ಮುಗಿಸಿದ್ದಾರೆ. 20518 ಜನರು 28 ದಿನಗಳ ರಿಪೋರ್ಟಿಂಗ್‌ ಅವಧಿಯಲ್ಲಿದ್ದಾರೆ. 211 ಜನರು ಕೋವಿಡ್‌-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 29 ಜನರು ಆಸ್ಪತ್ರೆಯಲ್ಲಿರುವ ಕೋವಿಡ್‌-19 ಸಕ್ರಿಯ ರೋಗಿಗಳಾಗಿದ್ದಾರೆ. ಜಿಲ್ಲೆಯಲ್ಲಿ ಈ ವರೆಗೆ 26,969 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, 247 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 7 ಜನರು ಮೃತಪಟ್ಟಿದ್ದಾರೆ. 26,610 ಜನರ ವರದಿ ನೆಗೆಟಿವ್‌ ಬಂದಿದೆ. 112 ಜನರ ವರದಿ ನಿರೀಕ್ಷೆಯಲ್ಲಿದ್ದೇವೆ. ಸೋಂಕಿತರಲ್ಲಿ ರೋಗದಿಂದ ಗುಣಮುಖರಾಗಿ 211 ಜನರು ಮನೆಗೆ ಮರಳಿದ್ದಾರೆ ಎಂದು ವಿವರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next