ವಿಜಯಪುರ : ಜಿಲ್ಲೆಯ ವಿವಿಧೆಡೆ ಮಂಗಳವಾರ ರಾತ್ರಿ ಸಿಡಿಲು ಸಹಿತ ಸುರಿದ ಮಳೆಗೆ 14 ಕುರಿಗಳು ಸಾವಿಗೀಡಾದ ಘಟನೆ ಕೊಲ್ಹಾರ ತಾಲೂಕಿನಲ್ಲಿ ನಡೆದಿದೆ.
ವಿಜಯಪುರ ತಾಲೂಕಿನ ಅಲಿಯಾಬಾದ್ ಮೂಲದ ದೊಂಡಿಬಾ ಸಂಡಗೆ ಎಂಬ ಕುರಿಗಾಹಿ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಮಸೂತಿ ಗ್ರಾಮದ ಹೊರ ವಲಯದಲ್ಲಿ ತಮ್ಮ ಕುರಿಗಳನ್ನು ಮೇಯಲು ಬಿಟ್ಟಿದ್ದರು. ರಾತ್ರಿ ವೇಳೆ ಮಳೆ ಸುರಿಯಲಾರಂಭಿಸಿದ್ದು, ಆ ವೇಳೆ ಸಿಡಿಲು ಬಡಿದು ದುರ್ಘಟನೆ ನಡೆದಿದೆ.
ಕುರಿಗಳನ್ನು ಕಳೆದುಕೊಂಡಿರುವ ಕುರಿಗಾಯಿ ದೊಂಡಿಬಾ ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಗುತ್ತಿಗೆದಾರರ ಬೇಜವಾಬ್ದಾರಿ, ಕಾಮಗಾರಿ ವಿಳಂಬದಿಂದ ಮನೆಗಳಿಗೆ ನೀರು :ಎಸ್.ಟಿ.ಸೋಮಶೇಖರ್ ಕಿಡಿ