ವಿಜಯಪುರ : ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಮಹಿಳೆಯ ಪತಿ ತನ್ನ ಪತ್ನಿ ಹಾಗೂ ಆಕೆಯೊಂದಿಗೆ ಇದ್ದ ವ್ಯಕ್ತಿಯನ್ನು ಕೊಡಲಿಯಿಂದ ಕೊಚ್ಚಿ ಜೋಡಿ ಕೊಲೆ ಮಾಡಿರುವ ಕೃತ್ಯ ಜಿಲ್ಲೆಯ ಇಂಡಿ ತಾಲ್ಲೂಕಿನ ಬಂಥನಾಳ ಗ್ರಾಮದಲ್ಲಿ ಜರುಗಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಬಂಥನಾಳ ಗ್ರಾಮದ ತೋಟದ ಮನೆಯಲ್ಲಿ ಈ ಭೀಕರ ಘಟನೆ ಜರುಗಿದೆ.
ರುದ್ರಪ್ಪ ಆಲಮೇಲ ಹಾಗೂ ಈರಮ್ಮ ಆಲಮೇಲ ಇಬ್ಬರ ಮಧ್ಯೆ ಅನೈತಿಕ ಸಂಬಂಧ ಇದೆ ಎಂದು ಈರಮ್ಮಳ ಪತಿ ಲಕ್ಷ್ಮಣ, ಪತ್ನಿ ಹಾಗೂ ರುದ್ರಪ್ಪ ಇವರನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾನೆ.
ಮಂಗಳವಾರ ತಡರಾತ್ರಿ ಕೃತ್ಯ ನಡೆದಿದ್ದರೂ ಬುಧವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಅಭಿವೃದ್ಧಿ ವಿಚಾರದಲ್ಲಿ ನಾನು ಹೆದರೋ ಮಗ ಅಲ್ಲ : ಸರಕಾರದ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿರುವ ಇಂಡಿ ಸಿ.ಪಿ.ಐ.ರಾಜಶೇಖರ, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.