ವಿಜಯಪುರ: ಜಿಲ್ಲೆಯಲ್ಲಿ ಸೋಮವಾರ(ಸೆ.23) ರಾತ್ರಿ ಸುರಿದ ಮಳೆಗೆ ನಗರದ ಕೆಲ ಕಾಲೋನಿಗಳಲ್ಲಿ ಮನೆಗಳು ಜಲಾವೃತಗೊಂಡಿದ್ದು, ಜಿಲ್ಲಾಧಿಕಾರಿ ಟಿ.ಭೂಬಾಲನ್ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧಾರಾಕಾರ ಮಳೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಮನೆಗಳಿಗೆ ನೀರು ನುಗ್ಗಿ ಪರದಾಡುವಂತಾಗಿದೆ. ಹೀಗಾಗಿ ನಗರದ ಮುಜಾವರ್ ಕಾಲೋನಿ ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಗಿದ್ದರು. ಇದೇ ವೇಳೆ, ಜಿಲ್ಲಾಧಿಕಾರಿಗಳ ವಾಹನ ಆಗಮಿಸಿತು. ಆಗ ರಸ್ತೆ ತಡೆಯುವವರ ಮನವೊಲಿಸಲು ಗನ್ ಮ್ಯಾನ್ ಪ್ರಯತ್ನಿಸಿದರು.
ಇದರಿಂದ ಸ್ಥಳೀಯರು ವಾಗ್ವಾದ ನಡೆಸಿದರು. ಈ ವೇಳೆ, ಜನರನ್ನು ಜಿಲ್ಲಾಧಿಕಾರಿ ಭೂಬಲನ್ ಸಮಾಧಾನ ಪಡಿಸಿ, ಸಮಸ್ಯೆ ಆಲಿಸಿದರು. ಅಲ್ಲದೇ, ಜಿಲ್ಲಾಧಿಕಾರಿ ಬಳಿ ಜನರು ಸಮಸ್ಯೆಗಳ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ನೀರನ್ನು ತೆರವು ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಭರವಸೆ ನೀಡಿದರು.
ಇದನ್ನೂ ಓದಿ: Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು