Advertisement

Vijayapura: ಸಾತ್ವಿಕ ಆರೋಗ್ಯ ವಿಚಾರಿಸಿದ ಜಿಲ್ಲಾಧಿಕಾರಿ

12:18 PM Apr 05, 2024 | Team Udayavani |

ವಿಜಯಪುರ: ಕೊಳವೆ ಬಾವಿಗೆ ಬಿದ್ದರೂ ಸುರಕ್ಷಿತವಾಗಿ ಹೊರಬಂದ 14 ತಿಂಗಳ ಮಗು ಸಾತ್ವಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜಿಲ್ಲಾಡಳಿತದ ಅಧಿಕಾರಿಗಳು ಭೇಟಿ ನೀಡಿ ಮಗುವಿನ ಆರೋಗ್ಯ ವಿಚಾರಿಸಿದ್ದಾರೆ.

Advertisement

ಶುಕ್ರವಾರ ಬೆಳಿಗ್ಗೆ ಮಗು ಚಿಕಿತ್ಸೆ ಪಡೆಯುತ್ತಿರುವ ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಭೂಬಾಲನ್, ಸಿಇಒ ರಿಷಿ ಆನಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾತ್ವಿಕ್ ಆರೋಗ್ಯ ವಿಚಾರಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಮಗುವಿನ ಆರೋಗ್ಯದ ಸ್ಥಿತಿಗತಿ ಕುರಿತು ಜಿಲ್ಲಾಧಿಕಾರಿಗಳಿಗೆ ವಿವರ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next