Advertisement

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ಮತ್ತೆ ಭಯದಲ್ಲಿ ಜನ

08:18 AM Feb 03, 2023 | Kavyashree |

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಗುರುವಾರ (ಫೆ.2) ರಾತ್ರಿ ಹಾಗೂ ಶುಕ್ರವಾರ (ಫೆ.3) ಬೆಳಗಿನ ಜಾವ ಭೂಕಂಪನ ಸಂಭವಿಸಿದೆ.

Advertisement

ಗುರುವಾರ ರಾತ್ರಿ 10-05 ಹಾಗೂ ಶುಕ್ರವಾರ ನಸುಕಿನ 1-47 ಕ್ಕೆ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ, ಟಕ್ಕಳಕಿ, ಸೋಮದೇವರಹಟ್ಟಿ, ಸಿದ್ದಾಪುರ ಕೆ. ಮಲಕನದೇವರಹಟ್ಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೂಕಂಪನ ಸಂಭವಿಸಿದೆ.

ಕರ್ನಾಟಕದ ಗಡಿಯಲ್ಲಿರುವ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಈ ಗ್ರಾಮಗಳಲ್ಲಿ ಮಾತ್ರವಲ್ಲದೆ ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತಲು ಭೂಕಂಪನ ಅನುಭವ ಆಗಿದೆ.

ಭೂಮಿ ಕಂಪಿಸುತ್ತಲೇ ಜನರು ಜೀವ ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಶುಕ್ರವಾರ ನಸುಕಿನ 1-47 ಕ್ಕೆ ಸಂಭವಿಸಿದ ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7 ರಷ್ಟು ಪ್ರಮಾಣ ದಾಖಲಾಗಿದೆ. ಭೂಕಂಪನದ ಕೇಂದ್ರ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬಿವರಗಿ ಗ್ರಾಮದಲ್ಲಿ ಕೇಂದ್ರೀಕೃತವಾಗಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next