ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ಭೂಮಿ ನಡುಗಿದ ಅನುಭವವಾಗಿದ್ದು, ತಿಕೋಟಾ ತಾಲೂಕು ಕೇಂದ್ರ ಸೇರಿ ಸುತ್ತಮುತ್ತಲ ಪ್ರದೇಶದಲ್ಲಿ ಭೂಕಂಪನದ ಅನುಭವವಾಗಿದೆ.
Advertisement
ಶುಕ್ರವಾರ ನಸುಕಿನಲ್ಲಿ 3ರಿಂದ 5 ಗಂಟೆವರೆಗೆ ಈ ಪ್ರದೇಶದಲ್ಲಿ ಭೂಮಿ ಕಂಪಿಸಿದ್ದು, ಮನೆಗಳಲ್ಲಿ ಮಲಗಿದ್ದ ಜನ ಭಯದಿಂದ ಹೊರಗೆ ಓಡಿ ಬಂದಿದ್ದಾರೆ. ಆದರೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸಿಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಾಹಿತಿ ಆಧರಿಸಿ ಜಿಲ್ಲಾಡಳಿತ ಭೂಕಂಪನ ಘಟನೆಯನ್ನು ನಿರಾಕರಿಸಿದೆ.
ಇದನ್ನೂ ಓದಿ : ಚಾಂದಿನಿ ಚೌಕ್ ನಲ್ಲಿ ಭಾರೀ ಅಗ್ನಿ ಅವಘಡ ; 100 ಕ್ಕೂ ಹೆಚ್ಚು ಅಂಗಡಿಗಳು ಭಸ್ಮ