Advertisement

ಇಂದಿನಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ

05:18 PM Jul 09, 2020 | Naveen |

ವಿಜಯಪುರ: ನಗರದಲ್ಲಿ ಜು.9ರಿಂದ 20ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್‌ ಫೋನ್‌ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಆದೇಶ ಹೊರಡಿಸಿದ್ದಾರೆ.

Advertisement

ಅದರಂತೆ ಮೌಲ್ಯಮಾಪನ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಸಬೇಕು ಹಾಗೂ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್‌ ಪ್ರದೇಶವನ್ನು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಮೌಲ್ಯಮಾಪನ ಮುಕ್ತಾಯವಾಗುವವರೆಗೆ 09 ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಮೌಲ್ಯಮಾಪನ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌ಗಳು, ಸೈಬರ್‌ ಕೆಫೆಗಳು ಹಾಗೂ ಕೋಚಿಂಗ್
ಕೇಂದ್ರಗಳು ತೆರೆಯದಂತೆ ಅವರು ಆದೇಶಿಸಿದ್ದಾರೆ.

ಕೆಒಎಸ್‌ ಪರೀಕ್ಷೆ ನಗರದಲ್ಲಿ ಜು.15ರ ವರೆಗೆ ಕೆಒಎಸ್‌ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಯಾರೂ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಬೇಸಿಕ್‌ ಮೊಬೈಲ್‌ ಸೆಟ್‌ ಮಾತ್ರ ಬಳಸಲು ಅವಕಾಶವಿದೆ ಎಂದು ಡಿಸಿ ವೈ.ಎಸ್‌. ಪಾಟೀಲ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ ಪ್ರದೇಶವನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರಗಳ ಸುತ್ತಲೂ ಪ್ರವೇಶ ನಿಷಿದ್ಧ. ಅಲ್ಲದೇ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌ಗಳು, ಸೈಬರ್‌ ಕೆಫೆಗಳು ಹಾಗೂ ಕೋಚಿಂಗ್‌ ಕೇಂದ್ರಗಳು ತೆರೆಯದಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next