Advertisement
ತೊರವಿ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿ ಜಯಂತಿ ಪ್ರಯುಕ್ತ ಹಮ್ಮಿಕೊಂಡಿದ್ದ ಅಸ್ಪೃಶ್ಯತೆ ನಿರ್ಮೂಲನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
Related Articles
Advertisement
ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಮಹಾತ್ಮ ಗಾಂಧಿಧೀಜಿ ಹಾಗೂ ಡಾ| ಬಿ.ಆರ್. ಅಂಬೇಡ್ಕರ್ ಅವರು ಅಸ್ಪೃಶ್ಯತೆ ನಿವಾರಣೆಗೆ ಶ್ರಮಿಸಿದ್ದರು. ಅಂತಹ ಮಹಾನ್ ನಾಯಕರ ಆದರ್ಶಗಳನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸೌಹಾರ್ದಯುತ ಬದುಕು ಸಾಗಿಸಬೇಕು.
ಮಕ್ಕಳು ಶಿಕ್ಷಣವಂತರಾದಲ್ಲಿ ಇಂತಹ ಅನಿಷ್ಠ ಪದ್ಧತಿಗಳಿಂದ ದೂರ ಉಳಿಯಲು ಸಾಧ್ಯವಿದೆ. ಅದರಂತೆ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಲ್ಲಿ ಇಂತಹ ಸಾಮಾಜಿಕ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಲು ಸಾಧ್ಯವಿದೆ ಎಂದರು.
ಉಪನ್ಯಾಸ ನೀಡಿದ ನಿಲೇಶ ಬೇನಾಳ, ಜಿಲ್ಲೆಗೆ ನಾಲ್ಕು ಬಾರಿ ಭೇಟಿ ನೀಡಿದ್ದ ಮಹಾತ್ಮ ಗಾಂಧೀಜಿ 1934ರ ಮೇ 8ರಂದು ತೊರವಿ ಗ್ರಾಮಕ್ಕೆ ಭೇಟಿ ನೀಡಿ ಈ ಗ್ರಾಮವೂ ಸೇರಿದಂತೆ 11 ಬಾರಿ ಅಸ್ಪೃಶ್ಯತೆ ನಿವಾರಣೆ ಯಾತ್ರೆ ಕೈಗೊಂಡಿದ್ದರು. ದೇಶಕ್ಕೆ ಸ್ವಾತಂತ್ರ್ಯಸಿಗದಿದ್ದರೂ ಸರಿ ಸಮಾಜದಲ್ಲಿ ಅಸ್ಪೃಶ್ಯತೆ ಅನಿಷ್ಠ ಪದ್ಧತಿ ಇರಬಾರದರು ಎಂದರು. ಗ್ರಾಮದ ಮುಖಂಡ ಅಡಿವೆಪ್ಪ ಸಾಲಗಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾಡಳಿತ ತೊರವಿ ಗ್ರಾಮದಲ್ಲಿ ಅಸ್ಪೃಶ್ಯತೆ ನಿರ್ಮೂಲನಾ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದಕ್ಕೆ ಜಿಲ್ಲಾಡಳಿತಕ್ಕೆ ಕೃತಜ್ಞತೆ ಸಲ್ಲಿಸಿದರು. ತೊರವಿ ಗ್ರಾಪಂ ಅಧ್ಯಕ್ಷ ಅನಿಲ ಜಗತಾಪ, ಉಪಾಧ್ಯಕ್ಷೆ ಪಾರ್ವತಿ ಬಬಲಾದಿ, ನಾಗರಾಜ ಲಂಬು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ್ ನದಾಫ್, ತಾಪಂ ಇಒ ಬಿ.ಎಸ್. ರಾಠೊಡ, ಬಿಇಒ ಆರೀಫ್ ಬಿರಾದಾರ, ತಾಲೂಕು ವೈದ್ಯಾಧಿ ಕಾರಿ ಡಾ| ಕವಿತಾ, ಆರೋಗ್ಯ ಇಲಾಖೆ ರಾಜೇಶ್ವರಿ ಇದ್ದರು.