Advertisement
ನಗರದ ಜೆ.ಎಚ್.ಪಟೇಲ್‌ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ ಕನಸಾದ ಪ್ರಬುದ್ದ ಭಾರತ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಹಾಗೂ ಯುವಕರು ಪಾತ್ರ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ತಿ.ನರಸೀಪುರ ನಳಂದ ಬುದ್ಧ ವಿಹಾರದ ಬಂತೇ ಬೋಧಿರತ್ನ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಕೆಟ್ಟವರ ಸಂಖ್ಯೆಯ ಹೆಚ್ಚಾಗಿರುವ ಕಾರಣದಿಂದ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಇದು ನಿಲ್ಲಬೇಕಾದರೆ ಪ್ರತಿಯೊಬ್ಬರ ಬುದ್ಧ ದಮ್ಮ ಪಾಲನೆ ಮಾಡಿದರೆ ಕ್ರಾಂತಿಕಾರಿಕ ಬದಲಾವಣೆ ತರಬಹುದು ಎಂದರು.
Related Articles
Advertisement
ಮೌನ ಆಚರಣೆ: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಬಾಲಕಿ ಸ್ಮರಣಾರ್ಥ 2 ನಿಮಿಷಗಳ ಕಾಲ ಮೌನ ಆಚರಿಸಿ, ಗೌರವ ಸಲ್ಲಿಸಲಾಯಿತು.
ಕೆಲ ಕಾಲ ಧರಣಿ: ಕಾರ್ಯಕ್ರಮ ಮುಕ್ತಾಯಗೊಂಡ ನಂತರ ನಗರದ ಜಿಲ್ಲಾಡಳಿತ ಭವನದ ಎದುರುಗಡೆಯಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಧರಣಿ ನಡೆಸಿದರು.
ಜನಪದ ಗಾಯಕ ನರಸಿಂಹಮೂರ್ತಿ, ದಲಿತ ಮುಖಂಡರಾದ ಆಲೂರು ನಾಗೇಂದ್ರ, ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರಕಲವಾಡಿ ನಾಗೇಂದ್ರ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು, ಸಂಘಟನಾ ಕಾರ್ಯದರ್ಶಿಗಳಾದ ಗೋವಿಂದರಾಜು, ಕಂದಹಳ್ಳಿ ನಾರಾಯಣ್, ಶಿವಕುಮಾರ್, ದೊರೆ ಸ್ವಾಮಿ, ಶ್ರೀನಿವಾಸ, ಭೀಮವಾದ ಜಿಲ್ಲಾ ಸಂಚಾಲಕ ಸಿದ್ದರಾಜುದೊಡ್ಡಿ ಇಂದವಾಡಿ, ಕದಸಸಂ ಅಧ್ಯಕ್ಷ ಶಿವಣ್ಣ, ಮಾನವ ಬಂದುತ್ವ ವೇದಿಕೆ ಜಿಲ್ಲಾ ಸಂಯೋಜಕ ಸುಭಾಷ್ಮಾಡ್ರಳ್ಳಿ ನಂಜುಂಡಸ್ವಾಮಿ, ಸ್ವಾಮಿ ಹಾಜರಿದ್ದರು.