ವಿಜಯಪುರ: ಇಲ್ಲಿನ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಶಸ್ತ್ರಚಿಕಿತ್ಸಾ ಲೋಪ ಪ್ರಕರಣದ ಕುರಿತು ಕರ್ನಾಟಕ ರಾಜ್ಯ ಲೋಕಾಯುಕ್ತರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಮುಂದಾಗಿದೆ.
ಸದರಿ ಪ್ರಕರಣದ ಕುರಿತು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿರುವ ಕರ್ನಾಟಕ ರಾಜ್ಯ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ, ನಂತರ ನಗರದಲ್ಲಿರುವ ಪ್ರವಾಸಿ ಮಂದಿರದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ, ಸಭೆಯಲ್ಲಿದ್ದ ಜಿಲ್ಲಾ ಆಸ್ಪತ್ರೆಯ ಸರ್ಜನ್ ಅವರಿಗೆ ಸಾರ್ವಜನಿಕ ಆರೋಗ್ಯ ಸೇವೆ ನೀಡುವಲ್ಲಿ ಆಗಿರುವ ಲೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸಾರ್ವಜನಿಕ ಹಿತಾಸಕ್ತಿಗಾಗಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸುವುದಾಗಿ ಎಚ್ಚರಿಸಿದರು.
ಶಸ್ತ್ರ ಚಿಕಿತ್ಸೆಯಂಥ ಗಂಭೀರ ವಿಷಯದಲ್ಲಿ ನಿರ್ಲಕ್ಷ ತೋರಿರುವ ತಪ್ಪಿತ್ತರ ವಿರುದ್ಧ ಕ್ರಮ ಕೈಗೊಳ್ಳಲೇಬೇಕಿದೆ. ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿರುವ ಬಾಣಂತಿರಯ ಶಸ್ತ್ರ ಚಿಕಿತ್ಸಾ ವ್ಯವಸ್ಥೆಯಲ್ಲಿ ಲೋಪ ಸಣ್ಣ ವಿಷಯವಲ್ಲ. ಹೀಗಾಗಿ ಸದರಿ ಲೋಪದಿಂದ ಮಹಿಳೆಯರ ಆರೋಗ್ಯದ ಸಮಸ್ಯೆ ಸೃಷ್ಟಿಯಾಗಿದೆ. ಹೀಗಾಗಿ ಈ ಲೋಪಕ್ಕೆ ಕಾರಣವಾದವರನ್ನು ಪತ್ತೆ ಹೆಚ್ಚಲೇಬೇಕಿದೆ. ಯಾರಿಂದ ಲೋಪವಾಯ್ತು, ಲೋಪಕ್ಕೆ ಕಾರಣವೇನು, ಈ ಲೋಪ ತಪ್ಪಿಸಲು ಸಾಧ್ಯವಾಗಲಿಲ್ಲ ಏಕೆ ಎಂಬ ಸಮಗ್ರ ತನಿಖೆಯ ಅಗತ್ಯವಿದೆ. ಇದಕ್ಕಾಗಿ ತಪ್ಪಿತಸ್ತರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲಿಸುವುದಾಗಿ ಎಚ್ಚರಿಸಿದರು.
ಇದನ್ನೂ ಓದಿ:ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಉದ್ದೇಶದಿಂದ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ: ಈಶ್ವರಪ್ಪ
Related Articles
ಲೋಕಾಯುಕ್ತದಿಂದ ದೂರು ದಾಖಲಿಸಿದ ನಂತರ ಸಂಬಂಧಿಸಿದವರಿಗೆ ನೋಟೀಸ್ ಜಾರಿಯಾಗಲಿವೆ. ಈಗ ಆಗಿರುವ ಪ್ರಮಾದದ ಬಗ್ಗೆ, ಕೈಗೊಂಡ ಕ್ರಮಗಳ ಬಗ್ಗೆ, ಇಂತಹ ಪ್ರಕರಣಗಳು ಮರುಕಳಿಸದ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ವರದಿ ನೀಡಲು ಸಂಬಂಧಿಸಿದವರಿಗೆ ಸೂಚಿಸಿದ್ದಾಗಿ ಹೇಳಿದರು.
ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸಹಾಯಕ ಆಯುಕ್ತರ ನೇತೃತ್ವ ಸಮಿತಿಯಿಂದ ಪಡೆದಿರುವ ವರದಿಯನ್ನು ಅವಲಕಿಸಲಾಗುತ್ತದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಈಗಾಗಲೇ ಸಿದ್ದಪಡಿಸಿರುವ ವರದಿಯ ಬಗ್ಗೆಯೂ ಚರ್ಚಿಸುವುದಾಗಿ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ವೆಂಕಣ್ಣ ಹೊಸಮನಿ, ಜಿಲ್ಲಾಧಿಕಾರಿ ಡಾ.ವಿ.ಬಿ.ದಾನಮ್ಮನವರ, ಜಿ.ಪಂ. ಸಿಇಒ ರಾಹುಲ್ ಶಿಂಧೆ, ಎಸ್ಪಿ ಆನಂದಕುಮಾರ, ವಿಜಯಪುರ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣವರ, ಸಹಾಯಕ ಆಯುಕ್ತ ಬಲರಾಮ ಲಮಾಣಿ, ಸರ್ಕಾರಿ ವಿಶೇಷ ವಕೀಲ ಅರ್ಜುನ ಮಿಸಾಳೆ, ಲೋಕಾಯುಕ್ತ ಇನ್ಸಪೆಕ್ಟರ್ ಗುರುನಾಥ ಚವ್ಹಾಣ, ಆನಂದ ಟಕ್ಕಣ್ಣವರ, ಡಿಎಚ್‍ಒ ರಾಜಕುಮಾರ ಯರಗಲ್ಲ, ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಎಸ್.ಎಂ.ಲಕ್ಕಣ್ಣವರ ಸೇರಿದಂತೆ ಇತತರರು ಸಭೆಯಲ್ಲಿ ಉಪಸ್ಥಿತರಿದ್ದರು.