ವಿಜಯಪುರ: ಜಿಲ್ಲೆಯಲ್ಲಿ ಮೂರು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮಂಗಳವಾರ ಮತ್ತೆ ಸುರಿಯಲು ಅಸರಂಭಿಸಿದೆ.
ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ, ದೇವರಹಿಪ್ಪರಗಿ, ಬಸವನಬಾಗೇವಾಡಿ ತಾಲೂಕಿನ ಹಲವು ಹಳ್ಳಿಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ.
ಕಳೆದ ವಾರ ಸುರಿದ ಭಾರಿ ಮಳೆಗೆ ಜಿಲ್ಲೆಯಲ್ಲಿ 100 ಮಿ.ಮೀ. ಗೂ ಅಧಿಕ ಮಳೆಯಾಗಿದ್ದು, ಸುಮಾರು 600 ಕೋಟಿ ರೂ.ಗೂ ಹೆಚ್ಚು ಪ್ರಮಾಣದಲ್ಲಿ ಬೆಳೆ, ಮನೆ, ರಸ್ತೆ, ಸೇತುವೆ ಸೇರಿ ಖಾಸಗಿ-ಸರ್ಕಾರಿ ಆಸ್ತಿ ನಷ್ಟವಾಗಿದೆ.
ಭೀಮಾ, ಡೋಣಿ ನದಿಗಳ ಪ್ರವಾಹ ಪರಿಸ್ಥಿತಿ ಇನ್ನೂ ಸುಧಾರಿಸಿ, ಹಾನಿಯ ಸಮೀಕ್ಷೆಯೂ ಆರಂಭಗೊಂಡಿಲ್ಲ. ಸಂತ್ರಸ್ತರು ಕಾಳಜಿ ಕೇಂದ್ರಗಳಲ್ಲೇ ಇದ್ದಾರೆ. ಇಂಥ ಸಂದರ್ಭದಲ್ಲೇ ಜಿಲ್ಲೆಯಲ್ಲಿ ಮತ್ತೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಕ್ಕೆ ಕಾರಣವಾಗುತ್ತಿದೆ.
ಇದನ್ನೂ ಓದಿ:ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ