Advertisement

ವಿಜಯಪುರ: ಮಾ.4 ರಂದು ಪಂಚಮಸಾಲಿ ಸಮಾಜದಿಂದ ಹೆದ್ದಾರಿ ತಡೆ

06:42 PM Mar 03, 2023 | Vishnudas Patil |

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 2-ಎ ಮೀಸಲು ಸೌಲಭ್ಯಕ್ಕೆ ಆಗ್ರಹಿಸಿ ಮಾ.4 ರಂದು ಬೆಳಗ್ಗೆ 11ಕ್ಕೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅಖಿಲ ಭಾರತ ಲಿಂಗಾಯತ್ ಪಂಚಮಸಾಲಿ ಯುವ ಘಟಕದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಪಂಚಮಸಾಲಿ ಸಮಾಜಕ್ಕೆ ಮೀಸಲು ಸೌಲಭ್ಯ ಕಲ್ಪಿಸುವ ವಿಷಯದಲ್ಲಿ ರಾಜ್ಯ ಸರ್ಕಾರ ಮಾತು ಕೊಟ್ಟು ವಂಚನೆ ಮಾಡಿದೆ ಎಂದು ದೂರಿದ್ದಾರೆ.

ಇದಲ್ಲದೇ ಕಳೆದ 53 ದಿನಗಳಿಂದ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳಾದ ಬಸವಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸರ್ಕಾರದ ಸಚಿವರು ಧರಣಿ ಸ್ಥಳಕ್ಕೆ ಭೇಟಿ ನೀಡಿ ಶ್ರೀಗಳಿಗೆ ಭರವಸೆ ನೀಡುವ ಸೌಜನ್ಯ ತೋರಿಲ್ಲ.

ನಿಡಗುಂಡಿಯಲ್ಲಿ ನಡೆಯುವ ಹೆದ್ದಾರಿ ತಡೆ ಹೋರಾಟದಲ್ಲಿ ವಿಜಯಪುರ, ಬಸವನಬಾಗೇವಾಡಿ, ಮುದ್ದೇಬಿಹಾಳ, ನಿಡುಗುಂದಿ, ತಾಳಿಕೋಟೆ ತಾಲೂಕಗಳ ಜನರು, ಝಳಕಿ ಬಳಿ ನಡೆಯುವ ಹೆದ್ದಾರಿ ಸಂಚಾರ ತಡೆ ಹೋರಾಟದಲ್ಲಿ ಇಂಡಿ, ಚಡಚಣ ತಾಲೂಕಿನ ಜನರು ಹಾಗೂ ಕೊಲ್ಹಾರ ಪಟ್ಟಣದ ಯುಕೆಪಿ ಹತ್ತಿರ ಹೆದ್ದಾರಿ ತಡೆ ಹೋರಾಟದಲ್ಲಿ ಕೊಲ್ಹಾರ ಹಾಗೂ ಇತರೆ ಕಡೆಗಳಲ್ಲಿನ ಪಂಚಮಸಾಲಿ ಸಮುದಾಯದ ಜನರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಂಕರಗೌಡ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next