Advertisement
ಕೃಷಿ, ತೋಟಗಾರಿಕೆ, ಜಲಾನಯನ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ಇಂಡಿ ತಾಲೂಕಿನ ಬರ ಪರಿಸ್ಥಿತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲೇ ಅತಿ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿರುವ ಇಂಡಿ ತಾಲೂಕಿನ ಅಥರ್ಗಾ, ತಡವಲಗಾ, ಗಣವಲಗಾ, ರೂಗಿ, ಬಬಲಾದ, ಹಳಗುಣಕಿ ಗ್ರಾಮಗಳಿಗೆ ಭೇಟಿ ನೀಡಿ ಕೃಷಿಹೊಂಡ, ಬಾವಿಗಳು ಹಾಗೂ ಜಲ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.
Related Articles
Advertisement
ಅದರಂತೆ ಗಣವಲಗಾ ಗ್ರಾಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿರ್ಮಿಸಲಾಗಿರುವ ನಾಲಾ ಬಂಡಿಂಗ್ ಕಾಮಗಾರಿ ಪರಿಶೀಲಿಸಿದರು. ರೂಗಿ ಗ್ರಾಮದಲ್ಲಿ ಕೃಷಿಭಾಗ್ಯ ಯೋಜನೆಯಡಿ ರೈತರಿಗೆ ನೀಡಲಾದ ಸೌಲಭ್ಯಗಳ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಬಲಾದ ಗ್ರಾಮದಲ್ಲಿ ಕೆರೆ ವೀಕ್ಷಣೆ ನಡೆಸುವ ಸಂದರ್ಭದಲ್ಲಿ ಭೀಮಾ ನದಿಯಿಂದ ನೀರಿನ ಸರಬರಾಜುವಿನಲ್ಲಿ ತೊಂದರೆ ಉಂಟಾಗುತ್ತಿದ್ದು, ಭೀಮಾ ನದಿ ನೀರಿನ ಕೊರತೆ ಉಂಟಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ರೀತಿ ಬಬಲಾದ ಗ್ರಾಮದಲ್ಲಿ ಅರಣ್ಯ ಸಸಿಗಳ ರಕ್ಷಣೆಗಾಗಿ ನಿರ್ಮಿಸಲಾದ ನೀರಿನ ಹೊಂಡವನ್ನು ಪರಿಶೀಲಿಸಿದರು.
ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣಾ ಚಟುವಟಿಕೆಗಳು ಹಾಗೂ ತೀವ್ರ ಬರ ಎದುರಿಸುತ್ತಿರುವ ಇಂಡಿ ತಾಲೂಕಿನ ಬರ ಪರಿಸ್ಥಿತಿ, ಕೈಗೊಂಡಿರುವ ಬರ ನಿರ್ವಹಣಾ ಕ್ರಮಗಳ ಬಗ್ಗೆ ವಿವರಿಸಿದರು. ಅದರಂತೆ ಕೃಷ್ಣಾ ನದಿಯ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಸೀಮಿತವಾಗಿ ಜಿಲ್ಲೆಯ ಪ್ರತಿ ಮನೆಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆ ಜಾರಿಗೊಂಡಲ್ಲಿ ಬಹುತೇಕ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಿದೆ. ಈ ಯೋಜನೆ ಜಾರಿಗೆ ಜನಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ ಎಂದು ವಿವರ ನೀಡಿದರು.