Advertisement
ಶುಕ್ರವಾರ ನಗರದ ಡಾ| ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
Related Articles
Advertisement
ಹೀಗಾಗಿ ಕನ್ನಡ ನೆಲದ ನಾವುಗಳು ಕನ್ನಡ ಭಾಷೆಗೆ ಪ್ರಥಮಾದ್ಯತೆ ನೀಡಬೇಕು. ನಿತ್ಯದ ಬದುಕಿನಲ್ಲಿ ಕನ್ನಡವನ್ನೇ ಉಸಿರಾಗಿಸಿಕೊಳ್ಳಬೇಕು. ಆಡಳಿತದಲ್ಲಿ ಅಧಿಕಾರಿ-ಸಾರ್ವಜನಿಕರು ಕೂಡ ಕನ್ನಡವನ್ನೇ ಕಡ್ಡಾಯವಾಗಿ ಬಳಸುವುದು ನಮ್ಮ ಕರ್ತವ್ಯ ಎಂಬ ಬದ್ಧತೆ ತೋರಿದರೆ ಮಾತ್ರವೇ ಕಡ್ಡಾಯ ಕನ್ನಡದ ಅನುಷ್ಠಾನ ಸಾಧ್ಯ ಎಂದು ಹೇಳಿದರು.
ಆದಿಕವಿ ಪಂಪ, ರನ್ನ, ಕುಮಾರವ್ಯಾಸ, ಬಸವಾದಿ ಶರಣರಿಂದ ಹಿಡಿದು ಸಮಕಾಲೀನ ಖ್ಯಾತ ಸಾಹಿತಿಗಳವರೆಗೆ ಕನ್ನಡ ಭಾಷೆ ಶ್ರೀಮಂತಿಕೆಯನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾರಸ್ವತ ಲೋಕದ ಗ್ರಂಥಗಳನ್ನು ನಾವು ಅಧ್ಯಯನ ಮಾಡಬೇಕಿದೆ. 12ನೇ ಶತಮಾನದಲ್ಲಿ ಬಸವಾದಿ ಶರಣರು ಇಡಿ ಜಗತ್ತಿಗೆ ವಚನ ಸಾಹಿತ್ಯ ಎಂಬ ಅಪೂರ್ವವಾದ ಸಾಹಿತ್ಯ ನೀಡಿದರು. ತಮ್ಮ ವಚನ ಸಾಹಿತ್ಯದ ಮೂಲಕ ಜೀವನ ಮೌಲ್ಯಗಳನ್ನು ಪ್ರತಿಪಾದಿಸಿದರು.
ನಾವು ನಮ್ಮ ಮಾತೃಭಾಷೆ ಕನ್ನಡದ ಬಗ್ಗೆ ಅಭಿಮಾನ ಹೊಂದಬೇಕೆ ವಿನಃ ಇನ್ನೊಂದು ಭಾಷೆ ಬಗ್ಗೆ ದುರಾಭಿಮಾನವನ್ನಲ್ಲ. ಕನ್ನಡ ನೆಲದಲ್ಲಿ ಬದುಕುತ್ತಿರುವ ನಾವೆಲ್ಲ ಜಲ, ನೆಲ ಹಾಗೂ ಭಾಷೆ ಪ್ರಶ್ನೆ ಬಂದಾಗ ಒಟ್ಟಾಗಿ ಎದುರಿಸಬೇಕು ಎಂದರು.
ಹಲವು ಆಯಾಮಗಳಿಂದ ಕನ್ನಡ ಭಾಷಾಭಿವೃದ್ಧಿಗೆ ಒತ್ತು ನೀಡುವ ಕೆಲಸ ನಡೆಯಬೇಕಿದೆ. ಆಗ ಮಾತ್ರ ಕನ್ನಡ ಭಾಷೆ ಹಾಗೂ ಕರ್ನಾಟಕವನ್ನು ವಿಶ್ವದ ನೆಲೆಗೆ ಕೊಂಡೊಯ್ಯಬಹುದು ಎಂಬ ಆಶಯವನ್ನು ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕಿದೆ ಎಂದು ಕರೆ ನೀಡಿದರು.
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮೇಲ್ಮನೆ ಸದಸ್ಯ ಅರುಣ ಶಹಾಪುರ, ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಪ್ರಕಾಶ ನಿಕ್ಕಂ ವೇದಿಕೆಯಲ್ಲಿದ್ದರು.