Advertisement

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

01:39 PM Oct 15, 2024 | sudhir |

ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.

Advertisement

ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.

ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ ಒತ್ತಾಯಿಸಿ ಪ್ರತಿಭಟನೆ ಆಯೋಜಿಸಲಾಗಿದೆ.

ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ವಿವಿಧ ನಾಯಕರು, ಮುಖಂಡರು ಭಾಗಿಯಾಗಿದ್ದು, ಸಮಾವೇಶದ ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ತೆರಳಿ ರಾಷ್ಟ್ರಪತಿ, ಪ್ರಧಾನಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ.

ಇದನ್ನೂ ಓದಿ: Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Advertisement
Advertisement

Udayavani is now on Telegram. Click here to join our channel and stay updated with the latest news.

Next