Advertisement

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ ನಿಷೇಧ

05:19 PM Jun 24, 2020 | Naveen |

ವಿಜಯಪುರ: ಜಿಲ್ಲೆಯಲ್ಲಿ ಈ ತಿಂಗಳ 25ರಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಕಡೆಗಳಲ್ಲಿ 106 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್‌ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ. ಜೂ.25ರಿಂದ ಜು.3ರ ವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆಯಲಿವೆ.

Advertisement

ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್‌ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾಗಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ತಿಳಿಸಿದ್ದಾರೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್‌ ಮೊಬೈಲ್‌ ಸೆಟ್‌ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಸುವದು. ಸುತ್ತಲೂ 200 ಮೀಟರ್‌ ಪ್ರದೇಶವನ್ನು ಬೆಳಿಗ್ಗೆ 9ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್‌ ಅಂಗಡಿಗಳು, ಕಂಪ್ಯೂಟರ್‌ ಸೆಂಟರ್‌ಗಳು, ಸೈಬರ್‌ ಕೆಫೆಗಳು ಹಾಗೂ ಕೋಚಿಂಗ್‌ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next