Advertisement
ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಪ್ರಕರಣದಲ್ಲಿ ಕಂಪನಿಗನ್ನು ಹೆದರಿಸಿ, ಗುತ್ತಿಗೆ ನೀಡಿ 7600 ಕೋಟಿ ರೂ. ಹಣ ಪಡೆದಿದ್ದಾರೆ. ಇದರ ತನಿಖೆಯಾದರೆ ಮೋದಿ ಅವರಿಗೆ ಖಚಿತವಾಗಿ ಶಿಕ್ಷೆಯಾಗಲಿದೆ ಎಂದರು.
Related Articles
Advertisement
ಇದಲ್ಲದೇ ಪ್ರತಿಭಾನ್ವಿತ ವಿದ್ಯಾವಂತ ಯುವಕರಿಗೆ 30 ಲಕ್ಷ ಉದ್ಯೋಗ ಕಲ್ಪಿಸುವ ಗುರಿಯೂ ಸೇರಿದಂತೆ ನಮ್ಮ ಪಕ್ಷದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ತರುವ ಪ್ರಗತಿಪರ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದೇವೆ ಎಂದರು.
ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಪ್ರಧಾನಿ ಯಾರೆಂದು ನಮ್ಮ ಪಕ್ಷದ ವರಿಷ್ಠರು ಹಿರಿಯರು, ನಮ್ಮೊಂದಿಗಿರುವ ಮಿತ್ರ ಪಕ್ಷಗಳ ನಾಯಕರು ಸೇರಿ ತೀರ್ಮಾನಿಸುತ್ತಾರೆ. ನಮ್ಮ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಕೂಡ ಸಮರ್ಥರಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಸೇರಿದಂತೆ ಅನೇಕರು ಪ್ರಧಾನಿ ಹುದ್ದೆಗೆ ಸಮರ್ಥರಿದ್ದಾರೆ ಎಂದರು.
ತ್ಯಾಗ ಮಾಡಿದ ಗಾಂಧಿ ಕುಟುಂಬ: ಈ ಹಿಂದೆ ಕಾಂಗ್ರೆಸ್ ಪಕ್ಷ ಗೆದ್ದಾಗ ಪ್ರಧಾನಿ ಆಗುವ ಅವಕಾಶ ಇದ್ದರೂ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಪ್ರಧಾನಿ ಹುದ್ದೆ ತ್ಯಾಗ ಮಾಡಿದ್ದಾರೆ. ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಸಂರಕ್ಷಣೆಗಾಗಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ನೀತಿ ಎಂದರು.
26ಕ್ಕೆ ವಿಜಯಪುರಕ್ಕೆ ರಾಹುಲ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಎ.26 ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು 11 ಗಂಟೆಗೆ ಬಿ.ಎಲ್.ಎಲ್.ಇ. ಹೊಸ ಕ್ಯಾಂಪಸ್ ಆವರಣದಲ್ಲಿ ನಡೆಯುವ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.
ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕರಾದ ಯಶವಂತ್ರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಕ್ಷೇತ್ರದ ಎಐಸಿಸಿ ಉಸ್ತುವಾರಿ ಸೈಯದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.