Advertisement

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

06:38 PM Apr 23, 2024 | keerthan |

ವಿಜಯಪುರ: ಪ್ರಧಾನಿ ಮೋದಿ ಸರ್ಕಾರದ ಚನಾವಣಾ ಬಾಂಡ್ ಹಗರಣ ಹೊರ ಬಂದಿದೆ. ನ ಖಾವೂಂಗಾ, ನ ಖಾನೆ ದೂಂಗಾ ಎಂದಿದ್ದ ಮೋದಿ ಪ್ರಾಮಾಣಿಕತೆಯ ಮುಖವಾಡ ಬಯಲಾಗಿದೆ. ತನಿಖೆಯ ಬಳಿಕ ಮೋದಿ ಜೈಲು ಕಂಬಿ ಎಣಿಸುವುದು ಖಚಿತ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆಸಿದರು.

Advertisement

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಬಾಂಡ್ ಪ್ರಕರಣದಲ್ಲಿ ಕಂಪನಿಗನ್ನು ಹೆದರಿಸಿ, ಗುತ್ತಿಗೆ ನೀಡಿ 7600 ಕೋಟಿ ರೂ. ಹಣ ಪಡೆದಿದ್ದಾರೆ. ಇದರ ತನಿಖೆಯಾದರೆ ಮೋದಿ ಅವರಿಗೆ ಖಚಿತವಾಗಿ ಶಿಕ್ಷೆಯಾಗಲಿದೆ ಎಂದರು.

ಪ್ರಧಾನಿ ಹುದ್ದೆಗೇರುವ ಮುನ್ನ ಮೋದಿ ನೀಡಿದ್ದ ಯಾವೊಂದು ಭರವಸೆಗಳೂ ಈಡೇರಿಲ್ಲ. ವಿದೇಶದಲ್ಲಿನ ಕಪ್ಪು ಹಣ ವಾಪಸ್ ಬರಲಿಲ್ಲ. ರೈತರ ಆದಾಯ ದ್ವಿಗುಣ ಬದಲು ಹೋರಾಟ ನಿರತ ರೈತರ ಮೇಲೆ ದಬ್ಬಾಳಿಕೆ ಮಾಡಿದೆ ಎಂದು ಟೀಕಿಸಿದರು.

ಅಚ್ಚೇದಿನ್ ತರುವುದಾಗಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಕಳೆದ 10 ವರ್ಷಗಳಲ್ಲಿ ಬೆಲೆ ಏರಿಕೆ ಮಾಡಿದ್ದೇ ಅಚ್ಚೇದಿನ್. ಆದರೆ ಕಾಂಗ್ರೆಸ್ ಪಕ್ಷ ರಾಜ್ಯದ ಜನರಿಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದರು.

ಇದಲ್ಲದೇ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ನೀಡಿರುವ ಎಲ್ಲ ಭರವಸೆಗಳನ್ನು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಈಡೇರಿಸುತ್ತೇವೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಿಳೆಯರು, ಯುವಕರಿಗೆ ವಾರ್ಷಿಕ 1 ಲಕ್ಷ ರೂ. ನೀಡುವುದು, ರೈತರ ಸಾಲಮನ್ನಾ, ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗ್ರಹಿಸವುದು, ಜಾತಿ ಗಣತಿ ಮಾಡಿ ಮೀಸಲಾತಿ ನೀಡುವುದು ನಮ್ಮ ಆದ್ಯತೆ ಎಂದರು.

Advertisement

ಇದಲ್ಲದೇ ಪ್ರತಿಭಾನ್ವಿತ ವಿದ್ಯಾವಂತ ಯುವಕರಿಗೆ 30 ಲಕ್ಷ ಉದ್ಯೋಗ ಕಲ್ಪಿಸುವ ಗುರಿಯೂ ಸೇರಿದಂತೆ ನಮ್ಮ ಪಕ್ಷದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ತರುವ ಪ್ರಗತಿಪರ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದೇವೆ ಎಂದರು.

ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಪ್ರಧಾನಿ ಯಾರೆಂದು ನಮ್ಮ ಪಕ್ಷದ ವರಿಷ್ಠರು ಹಿರಿಯರು, ನಮ್ಮೊಂದಿಗಿರುವ ಮಿತ್ರ ಪಕ್ಷಗಳ ನಾಯಕರು ಸೇರಿ ತೀರ್ಮಾನಿಸುತ್ತಾರೆ. ನಮ್ಮ ಪಕ್ಷದ ಯುವ ನಾಯಕ ರಾಹುಲ್ ಗಾಂಧಿ ಕೂಡ ಸಮರ್ಥರಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೂ ಸೇರಿದಂತೆ ಅನೇಕರು ಪ್ರಧಾನಿ ಹುದ್ದೆಗೆ ಸಮರ್ಥರಿದ್ದಾರೆ ಎಂದರು.

ತ್ಯಾಗ ಮಾಡಿದ ಗಾಂಧಿ ಕುಟುಂಬ: ಈ ಹಿಂದೆ ಕಾಂಗ್ರೆಸ್ ಪಕ್ಷ ಗೆದ್ದಾಗ ಪ್ರಧಾನಿ ಆಗುವ ಅವಕಾಶ ಇದ್ದರೂ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರು ಪ್ರಧಾನಿ ಹುದ್ದೆ ತ್ಯಾಗ ಮಾಡಿದ್ದಾರೆ. ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಸಂರಕ್ಷಣೆಗಾಗಿ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ನೀತಿ ಎಂದರು.

26ಕ್ಕೆ ವಿಜಯಪುರಕ್ಕೆ ರಾಹುಲ್: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಎ.26 ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು 11 ಗಂಟೆಗೆ ಬಿ.ಎಲ್.ಎಲ್.ಇ. ಹೊಸ ಕ್ಯಾಂಪಸ್ ಆವರಣದಲ್ಲಿ ನಡೆಯುವ ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ರಾಜು ಆಲಗೂರ, ಸಕ್ಕರೆ ಸಚಿವ ಶಿವಾನಂದ ಪಾಟೀಲ, ಶಾಸಕರಾದ ಯಶವಂತ್ರಾಯಗೌಡ ಪಾಟೀಲ, ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಕ್ಷೇತ್ರದ ಎಐಸಿಸಿ ಉಸ್ತುವಾರಿ ಸೈಯದ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next