Advertisement

ಗುಳೆ ತಡೆಗೆ ನರೇಗಾ ಯೋಜನೆ ಜಾರಿ: ಶಾಸಕ ಪಾಟೀಲ

05:26 PM May 23, 2020 | Naveen |

ವಿಜಯಪುರ: ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಡೆಯಲು ಹಾಗೂ ಹಳ್ಳಿಗಳಲ್ಲೇ ಉದ್ಯೋಗ ನಿಡುವ ಉದ್ದೇಶದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಯೋಜನೆ ಜಾರಿಗೆ ತರಲಾಗಿದೆ. ಹೀಗಾಗಿ ಹಳ್ಳಿಗರು ಗುಳೇ ಹೋಗದೇ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಹೇಳಿದರು.

Advertisement

ಶುಕ್ರವಾರ ಬಬಲೇಶ್ವರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ ಕೃಷಿ ಕಾರ್ಮಿಕರಿಗೆ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಹಳ್ಳಿಗಳಲ್ಲಿ ನೀರಿನ ಅಭಾವ ಕಂಡು ಬರುತ್ತದೆ. ಅದಕ್ಕೆ ಚೆಕ್‌ ಡ್ಯಾಂ, ಬಾಂದಾರ ಹಾಗೂ ಕೆರೆಗಳನ್ನು ತುಂಬುವ ಕಾರ್ಯದಲ್ಲಿ ತೊಡಗಬೇಕು. ಇದರಿಂದ ಅಂತರ್ಜಲ ಹೆಚ್ಚಳವಾಗಿ ಕೃಷಿ ಚಟುವಟಿಕೆಗಳಿಗೆ ಅನಕೂಲವಾಗಲಿದೆ ಎಂದರು. ಈ ಸಂದರ್ಭದಲ್ಲಿ ಬಬಲೇಶ್ವರ ತಾಪಂ ಇಒ ಬಸವರಾಜ ಬಿರಾದಾರ, ಪ್ರಕಾಶ ಮಸಳಿ, ಜಿಪಂ ಮಾಜಿ ಅಧ್ಯಕ್ಷ ವಿ.ಎಸ್‌.ಪಾಟೀಲ, ಬಬಲೇಶ್ವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಗೊಂಡ ಬಿರಾದಾರ, ಗ್ರಾಪಂ ಅಧ್ಯಕ್ಷೆ ಬೋರಮ್ಮ ಬುದಿಹಾಳ, ಪರಸಪ್ಪ ಪಡತಾರೆ, ಮುಖಂಡರಾದ ಧರ್ಮಣ್ಣ ಬಿಳೂರ, ಹನಮಂತ ಲೊಕುರಿ, ಪ್ರವೀಣ ಪಾಟೀಲ, ಸುರೇಶ ತಡಲಗಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next