ವಿಜಯಪುರ : ಕಾವೇರಿ ನೀರು ತಮಿಳುನಾಡಿಗೆ ಹರಿಸುವುದನ್ನು ತಡೆಯುವ ಕುರಿತು ವಿವಿಧ ರಾಜಕೀಯ ಪಕ್ಷಗಳು, ರೈತ, ಕನ್ನಡ ಹಾಗೂ ಜನಪರ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್‍ಗೆ ಕರೆ ನೀಡಿವೆ. ವಿಜಯಪುರ ಜಿಲ್ಲೆಯಲ್ಲಿ ಬಂದ್ ಗೆ ಬೆಂಬಲ ಘೋಷಣೆ ಆಗಿಲ್ಲ.
ಕರ್ನಾಟಕ ಬಂದ್ ಬೆಂಬಲಿಸಿ ವಿಜಯಪುರ ಜಿಲ್ಲೆಯಲ್ಲಿ ಯಾವ ಸಂಘಟನೆಗಳಿಂದಲೂ ಬೆಂಬಲ ಘೋಷಣೆಯಾಗಿಲ್ಲ. ಅಲ್ಲದೇ ಜಿಲ್ಲಾಡಳಿತ ಕೂಡ ಎಂದಿನಂತೆ ಸಾರಿಗೆ ಸಂಚಾರ ಇರಲಿಲ್ಲ. ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಸಾರಿದೆ.
ಸೆ.29 ರಂದು ಕರ್ನಾಟಕ ಬಂದ್ ಕರೆ ನೀಡಿರುವ ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳ ವಿಜಯಪುರ ಜಿಲ್ಲೆಯ ಘಟಕಗಳು ಬಂದ್ ಕರೆ ಅಥವಾ ಬೆಂಬಲ ನೀಡಿರುವ ಕುರಿತು ಗುರುವಾರ ಸಂಜೆಯ ವರೆಗೆ ಅಧಿಕೃತವಾಗಿ ಎಲ್ಲಿಯೂ ಬಹಿರಂಗವಾಗಿ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.
ಈ ಮಧ್ಯೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜಿಲ್ಲಾಡಳಿತ, ಬಂದ್ ಕರೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಜಿಲ್ಲೆಯಲ್ಲಿ ಸಾರ್ವಜನಿಕರ ಸಂಚಾರಕ್ಕೆ ಎಲ್ಲ ಸಾರಿಗೆ ವ್ಯವಸ್ಥೆ ಎಂದಿನಂತೆ ಇರಲಿದೆ. ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆಯೇ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಹೀಗಾಗಿ ತಮಿಳು ನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಪ್ರಾಧಿಕಾರ ನೀಡಿರುವ ಆದೇಶ ಪಾಲಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಬಿಜೆಪಿ, ಜೆಡಿಎಸ್ ಪಕ್ಷಗಳು, ರೈತಪರ ಸಂಘಟನೆಗಳು, ಕನ್ನಡ ಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಸೆ.29 ರಂದು ಕರೆ ನೀಡಿವೆ. ಆದರೆ ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಬಂದ್‍ಗೆ ಬೆಂಬಲ ಘೋಷಣೆ ಇಲ್ಲವಾಗಿದ್ದು, ಶುಕ್ರವಾರದ ಬಂದ್ ವಿಫಲವಾಗುವ ನಿರೀಕ್ಷೆ ಇದೆ.