Advertisement

ಅನಧಿಕೃತ ತಂಬಾಕು ಮಾರಾಟ ನಿಯಂತ್ರಿಸಿ: ಡಿಸಿ

12:03 PM May 30, 2020 | Naveen |

ವಿಜಯಪುರ: ಸಾರ್ವಜನಿಕರ ಆರೋಗ್ಯಕ್ಕೆ ಹಾನಿಕರವಾಗಿರುವ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌.ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ತ್ತೈಮಾಸಿಕ ಸಮನ್ವಯ ಸಮಿತಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಜಿಲ್ಲಾ ಹಾಗೂ ತಾಲೂಕು ತನಿಖಾ ತಂಡ ನಿರಂತರ ದಾಳಿ ಕೈಗೊಳ್ಳಬೇಕು. ಎಲ್ಲ ತಾಲೂಕುಗಳಲ್ಲಿ ತನಿಖಾ ದಳದ ಸದಸ್ಯರೊಂದಿಗೆ ಆಯಾ ತಾಲೂಕು ತಹಶೀಲ್ದಾರರು ನಾಲ್ಕು ತ್ತೈಮಾಸಿಕ ಸಭೆ ನಡೆಸಿ ಪ್ರತಿ ತಿಂಗಳು 2-3 ದಾಳಿ ನಡೆಸುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ತಂಬಾಕು ಮಾರಾಟ ಕೇಂದ್ರಗಳ ಮೇಲೆ ತನಿಖಾ ತಂಡಗಳಿಂದ ಆಗಾಗ್ಗೆ ದಾಳಿಯನ್ನು ನಡೆಸಬೇಕು. ಸರ್ಕಾರಿ ಕಚೇರಿಗಳಾದ ಮಾಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯತಿಗಳು ಉದ್ಯಮಿಗಳಿಗೆ ಪರವಾನಗಿ ನೀಡುವಾಗ ಎಲ್ಲ ಪಾನ್‌ಶಾಪ್‌ಗ್ಳು ಸೆಕ್ಷನ್‌-4 ಮತ್ತು ಸೆಕ್ಷನ್‌ 6(ಎ) ಸಂಬಂ ಧಿಸಿದ ನಾಮಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಹಾಗೂ ಎಲ್ಲ ಅಂಗಡಿ, ಹೋಟೆಲ್‌, ರೆಸ್ಟೋರೆಂಟ್‌, ಬೇಕರಿ ಹಾಗೂ ಲಾಡ್ಜ್ಗಳಲ್ಲಿ ಸೆಕ್ಷನ್‌-4 ಗೆ ಸಂಬಂಧಿಸಿದ ನಾಮಫಲಕ ಅಳವಡಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳನ್ನು ತಂಬಾಕು ಮುಕ್ತ ಕಚೇರಿಯಾಗಿ ಪರಿವರ್ತಿಸಲು ಅಗತ್ಯ ಇರುವ ಎಲ್ಲ ಕ್ರಮ ಕೈಗೊಳ್ಳಬೇಕು. ಶಿಕ್ಷಣ ಸಂಸ್ಥೆಗಳು ಸೆಕ್ಷನ್‌-4 ಮತ್ತು ಸೆಕ್ಷನ್‌-6(ಬಿ) ಗೆ ಸಂಬಂಧಿಸಿದ ನಾಮಫಲಕಗಳನ್ನು ಅಳವಡಿಸಿ ತಂಬಾಕು ಮುಕ್ತ ವಲಯವನ್ನಾಗಿ ಮಾಡಬೇಕು ಎಂದರು.

ಸಿಂದಗಿ ತಾಲೂಕನ್ನು ಕೋಟ್ಪಾ -2003 ರ ಕಾಯ್ದೆಯ ಉನ್ನತ ಅನುಷ್ಠಾನ ತಾಲೂಕನ್ನಾಗಿ ಘೋಷಿಸಲು ಆಯ್ಕೆ ಮಾಡಲಾಗಿದೆ. ಸಿಂದಗಿ ತಾಲೂಕಿನಲ್ಲಿ ಕೊಟ್ಪಾ ನಿಯಮಗಳು ಪರಿಣಾಮಕಾರಿಯಾಗಿ ಅನುಷ್ಠಾನ ಕೈಗೊಳ್ಳಬೇಕು. ಕೋಟಾ³ 2003ರ ಕಾಯ್ದೆಯ ಸೆಕ್ಷನ್‌-5 ಮತ್ತು 7 ರ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸುವುದು ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷ ಜಾಹಿರಾತು ಫಲಕಗಳನ್ನು ತೆರುವುಗೊಳಿಸಬೇಕು. ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ತಂಬಾಕು ಮುಕ್ತ ಪ್ರದೇಶಗಳಾಗಿಸುವ ನಿಟ್ಟಿನಲ್ಲಿ ಕಾರ್ಯ ಕೈಗೊಳ್ಳಬೇಕು ಎಂದರು.

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ| ಮಲ್ಲನಗೌಡ ಬಿರಾದಾರ ಮಾತನಾಡಿ, ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನವೆಂದು ಆಚರಿಸಲಾಗುತಿದೆ. 1987 ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಈ ಘೋಷಣೆ ಮಾಡಿದ್ದರಿಂದ ಪ್ರತಿ ವರ್ಷ ಆಚರಿಸಲಾಗುತ್ತಿದೆ. ಪ್ರಸಕ್ತ ವರ್ಷ ಯುವ ಪೀಳಿಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್‌ನ ಬಳಕೆಯಿಂದ ರಕ್ಷಣೆ ಮಾಡಬೇಕಿದೆ ಎಂದರು.

Advertisement

ಈ ಧ್ಯೇಯ ವಾಕ್ಯದೊಂದಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ಜೀವಕಾರಕ ವಸ್ತುವಿನ ಕುರಿತು ಜನರಲ್ಲಿ ಅರಿವು ಮೂಡಿಸಬೇಕಿದೆ. ಇದಕ್ಕಾಗಿ ಜಿಲ್ಲಾದ್ಯಂತ ಜನರಲ್ಲಿ ಅರಿವು ಮೂಡಿಸಿ ಜನರು ತಂಬಾಕು ಉತ್ಪನ್ನಗಳಿಂದ ದೂರ ಉಳಿಯುವಂತೆ ಪ್ರರೇಪಿಸಲಾಗುತ್ತಿದೆ ಎಂದರು. ಎಸ್ಪಿ ಅನುಪಮ ಅಗರವಾಲ್‌, ಜಿಪಂ ಸಿಇಒ ಗೋವಿಂದರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶಟ್ಟಿ, ಡಿಎಚ್‌ಒ ಮಹೇಂದ್ರ ಕಾಪ್ಸೆ, ಡಾ| ಶರಣಪ್ಪ ಕಟ್ಟಿ, ಡಾ| ಸಂಪತಕುಮಾರ ಗುಣಾರೆ, ಡಾ| ಕವಿತಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next