Advertisement

ಜಲಮೂಲಗಳ ಗಣತಿ ಕಾರ್ಯಕ್ಕೆ ಡಿಸಿ ಪಾಟೀಲ ಸೂಚನೆ

01:48 PM Jan 25, 2020 | Naveen |

ವಿಜಯಪುರ: ಸಣ್ಣ ನೀರಾವರಿ ಹಾಗೂ ನೀರಿನ ಆಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 6ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನ ಆಸರೆಗಳ ಗಣತಿ ಕಾರ್ಯ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

Advertisement

ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಶೇ. 100 ಕೇಂದ್ರ ಪುರಸ್ಕೃತ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿ ನಡೆಸಬೇಕು. ಹೀಗಾಗಿ ಜಿಲ್ಲೆಯಲ್ಲಿರುವ ಎಲ್ಲ ಸಣ್ಣ ನೀರಾವರಿ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯೀಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ಪುರಸಭೆ, ನಗರಸಭೆಗಳು ರಾಜ್ಯದ ಹಿತದೃಷ್ಟಿಯಿಂದ ಈ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಗಣತಿ ಕ್ಷೇತ್ರ ಕಾರ್ಯವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ರಾಜ್ಯದಲ್ಲಿರುವ 0-200 ಹೆಕ್ಟೇರ್‌ ಅಚ್ಚುಕಟ್ಟು ಎಲ್ಲ ನೀರಾವರಿ ಯೋಜನೆಗಳು ಸಣ್ಣ ನೀರಾವರಿ ಯೋಜನೆಗಳೆಂದು ಪರಿಗಣಿಸಿದ್ದು, ಅಂತರ್ಜಲ ಯೋಜನೆಗಳು ಹಾಗೂ ಮೇಲ್ಮಯ ಹರಿಯುವ ಜಲ ಯೋಜನೆಗಳು ಎಂದು ವಿಧಗಳಾಗಿ ವರ್ಗಿಕರಿಸಲಾಗಿದ್ದು ಅಂತರ್ಜಲ ಯೋಜನೆಗಳಡಿ ಅಗೆದ ಬಾವಿ, ಕೊಳವೆ ಬಾವಿಗಳು ನಮೂನೆ 1ರಲ್ಲಿ ಹಾಗೂ ಮೆಲ್ಮೈ ಹರಿಯುವ ಜಲ ಯೋಜನೆಗಳಡಿ ಏತ ನೀರಾವರಿ ಯೋಜನೆಗಳನ್ನು ನಮೂನೆ 2ರಲ್ಲಿ ಭರ್ತಿ ಮಾಡಿ ಗಣತಿ ಕಾರ್ಯ ಕೈಗೊಂಡು ಮಾಹಿತಿ ಸಂಗ್ರಹಿಸಬೇಕು. ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರರ ಮೇಲ್ವಿಚಾರಣೆಯಲ್ಲಿ ಗ್ರಾಮ
ಸಹಾಯಕರಿಂದ ಮಾಹಿತಿ ಸಂಗ್ರಹಿಸಬೇಕು. ಅದರಂತೆ ಭಾರಿ ಮತ್ತು ಮಧ್ಯಮ ನೀರಾವರಿ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್‌, ಗಣಿ ಮತ್ತು ಭೂ ವಿಜ್ಞಾನ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ, ಕೃಷಿ- ತೋಟಗಾರಿಕೆ ಇಲಾಖೆ, ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಗಣತಿದಾರರು ಮೊಬೈಲ್‌ ಸ್ನೇಹಿ ಆಫ್‌ ಬಳಸಿಕೊಂಡು ಅಕ್ಷಾಂಶ ಮತ್ತು ರೆಖಾಂಶ ಸಂಗ್ರಹಿಸಿ ಆನ್‌ಲೈನ್‌ ಸಾಫ್ಟ್‌ವೇರ್‌ನಲ್ಲಿ ಅಪ್ಲೋಡ್‌ ಮಾಡಲು ಗಣತಿದಾರರು, ಮೇಲ್ವಿಚಾರಕರು, ಸಂಬಂಧಿ ಸಿದ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸಿ ಗಣತಿ ಕ್ಷೇತ್ರ ಕಾರ್ಯ ಸಕಾಲದಲ್ಲಿ ಪೂರೈಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next