Advertisement
ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಸಫಾಯಿ ಕರ್ಮಚಾರಿಗಳ ಸಮೀಕ್ಷಾ ಕಾರ್ಯವನ್ನು ಯಾವ ಲೋಪವೂ ಇಲ್ಲದಂತೆ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಕಲ್ಪಿಸಲು ಸಮೀಕ್ಷೆ ನೆರವಾಗಲಿದೆ. ಅದರಂತೆ ಕೇಂದ್ರ ಸರ್ಕಾರ ಪೈಲಟ್ ಯೋಜನೆಯಾಗಿ ಕರ್ನಾಟಕ ರಾಜ್ಯದ ಒಟ್ಟು 11 ಜಿಲ್ಲೆಗಳಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತ ಇರುವುದು ಗಮನಕ್ಕೆ ಬಂದಿದೆ. ಈ ಪದ್ಧತಿ ಸಂಪೂರ್ಣ ನಿರ್ಮೂಲನೆಗಾಗಿ ಎಲ್ಲ ಸಫಾಯಿ ಕರ್ಮಚಾರಿಗಳ ಅಧಿಕೃತ ದತ್ತಾಂಶದ ಅಗತ್ಯವಿದೆ. ಇದಕ್ಕಾಗಿ ಬರುವ ಜುಲೈ ಅಂತ್ಯದೊಳಗೆ ಈ ಸಮೀಕ್ಷೆ ಕಾರ್ಯ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
Related Articles
Advertisement
ದೇಶದಲ್ಲಿ ಮಲ ಹೊರುವ ಪದ್ಧತಿ ಸಂಪೂರ್ಣ ನಿಷೇಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಿ ಪರ್ಯಾಯ ಉದ್ಯೋಗ, ಅವಶ್ಯಕ ಮನೆಗಳ ಸೌಲಭ್ಯ, ಜೀವನ ಭದ್ರತೆಗೆ ರಕ್ಷಣೆ ನೀಡಬೇಕು. ಈ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸಫಾಯಿ ಕರ್ಮಚಾರಿಗಳ ವಿಷಯದಲ್ಲಿ ರಾಷ್ಟ್ರೀಯ ಆಯೋಗ ಕೂಡ ಸರ್ಕಾರಿ, ಅರೆ-ಸರ್ಕಾರಿ ಹಾಗೂ ಖಾಸಗಿ ವಲಯಗಳಲ್ಲಿ ಇಂತಹ ಸ್ವಚ್ಛತಾ ಕಾರ್ಯದಲ್ಲಿ ತೊಡಗಿರುವವರನ್ನು ಗುರುತಿಸುವ ಅಂಗವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಸೂಚಿಸಲಾಗಿದೆ. ಎಲ್ಲ ರಾಜ್ಯಗಳ ರಾಜ್ಯ ಸರ್ಕಾರಗಳಿಗೂ ಈ ಕುರಿತು ನಿರ್ದೇಶನ ನೀಡಲಾಗುತ್ತದೆ ಎಂದು ವಿವರಿಸಿದರು.
ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಮಲ ಹೊರುವ ಪದ್ಧತಿ ನಿರ್ಮೂಲನೆಗೆ ಈ ಕೆಲಸದಲ್ಲಿ ತೊಡಗಿರುವವರನ್ನು ಗುರುತಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ವಿವಿಧ ಯಂತ್ರಗಳ ಮೂಲಕ ಸ್ವಚ್ಛತೆ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವುದಾಗಿ ಹೇಳಿದರು.
ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಜಿಲ್ಲೆಯಲ್ಲಿರುವ ಪ್ರತಿ ಕುಟುಂಬಗಳ ತಾಲೂಕಾವಾರು ಮಾಹಿತಿ, ಅವರು ಬಳಸುತ್ತಿರುವ ಶೌಚಗಳ ಶೌಚಗುಂಡಿ ಬಗ್ಗೆಯೂ ಪರಿಶೀಲನೆ ನಡೆಸಬೇಕು. ತಾಂತ್ರಿಕವಾಗಿ ಸಮಗ್ರ ಅಧ್ಯಯನ ನಡೆಸಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇಂಡಿ ನಗರದ ಹೊಟೆಲ್ವೊಂದರ ಶೌಚ ಸ್ವಚ್ಛತೆಗೆ ಇಳಿದು ಸಾವನ್ನಪ್ಪಿದ ಕರ್ಮಚಾರಿಗಳ ವಾರಸುದಾರರಿಗೆ ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಹೊಟೇಲ್ ಮಾಲೀಕರಿಂದ ಪರಿಹಾರ ಒದಗಿಸುವ ಕುರಿತು ಹಾಗೂ ತಪ್ಪಿತಸ್ಥರ ವಿರುದ್ಧ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಎಸ್ಪಿ ಪ್ರಕಾಶ ನಿಕ್ಕಂ ಇದ್ದರು. ಇಂಡಿ ತಾಪಂ ಇಒ ಬಿ.ಜೆ. ಇಂಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು