Advertisement

ತೈಲ ಬೆಲೆ ಏರಿಕೆಗೆ ವಿರೋಧ

03:39 PM Jul 03, 2020 | Naveen |

ವಿಜಯಪುರ: ದೇಶದಲ್ಲಿ ಪೆಟ್ರೋಲ್‌, ಡಿಸೇಲ್‌ ಸೇರಿದಂತೆ ಇಂಧನ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದು, ಸರ್ಕಾರ ಕೂಡಲೇ ಇಂಧನ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಫಲಕಗಳನ್ನು ಪ್ರದರ್ಶಿಸಿದರು. ಈ ವೇಳೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನರೆಡ್ಡಿ ಮಾತನಾಡಿ, ಪೆಟ್ರೋಲ್‌ ದರ 83 ರೂ. ಗಡಿ ದಾಟಿದ್ದು, ಡಿಸೇಲ್‌ 77 ರೂ. ಮೀರಿದೆ. ಇದರಲ್ಲಿ 55 ರೂ.ದಷ್ಟು ಸರ್ಕಾರದ ತೆರಿಗೆಯೇ ಸೇರಿದೆ. ಕಳೆದ 2 ತಿಂಗಳ ಹಿಂದೆ ಕೋವಿಡ್ ಲಾಕ್‌ಡೌನ್‌ ಸಮಯದಲ್ಲಿ ಜಾಗತಿಕವಾಗಿ ತೈಲ ಬೇಡಿಕೆ ಕುಸಿತ ಕಂಡಿದೆ. ಇದರಿಂದಾಗಿ ಕಚ್ಚಾ ತೈಲ ಬೆಲೆಯೂ ಶೂನ್ಯಕ್ಕೆ ತಲುಪಿತ್ತು. ಆದರೆ ಇದರ ಲಾಭವನ್ನು ಜನರಿಗೆ ತಲುಪಿಸದ ಕೇಂದ್ರ ಸರ್ಕಾರ ಪೆಟ್ರೋಲ್‌-ಡಿಸೇಲ್‌ ಮೇಲೆ ಪ್ರತಿ ಲೀಟರಿಗೆ 3 ರೂ. ಹೆಚ್ಚುವರಿ ಅಬಕಾರಿ ಸುಂಕ ವಿಧಿಸಿ ಜನ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.

ಜಿಲ್ಲಾ ಸಮಿತಿ ಸದಸ್ಯ ಬಾಳು ಜೇವೂರ ಮಾತನಾಡಿ, ಕೋವಿಡ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನಪರ ರೀತಿಯಾಗಿ ಸರ್ಕಾರಗಳು ನಡೆದುಕೊಳ್ಳಬೇಕು, ಪೆಟ್ರೋಲ್‌, ಡಿಸೇಲ್‌ ಸೇರಿದಂತೆ ವಿವಿಧ ಜೀವನಾವಶ್ಯಕ ವಸ್ತುಗಳಿಗೆ ಕಡಿಮೆ ದರ ನಿಗದಿ ಮಾಡಬೇಕು. ಕೂಡಲೇ ಇಂಧನ ಬೆಲೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ಪ್ರಭುಗೌಡ ಪಾಟೀಲ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ, ಮಲ್ಲಿಕಾರ್ಜುನ, ಸುನೀಲ ಸಿದ್ರಾಮಶೆಟ್ಟಿ, ಶೋಭಾ, ಸುಮಿತ್ರಾ, ವಿದ್ಯಾ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next