ವಿಜಯಪುರ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಂಗವಾಗಿ ವಿಜಯಪುರ ಜಿಲ್ಲೆಯಲ್ಲಿ 3.11 ಲಕ್ಷ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಗುರಿ ಹೊಂದಲಾಗಿದ್ದು ಎಲ್ಲರೂ ಸ್ಪಂದಿಸುವ ಮೂಲಕ ಗುರಿ ಸಾಧನೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹೇಳಿದರು.
ರವಿವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಿಕ್ಯಾಬ್ ಸಂಸ್ಥೆ ಸಂಯುಕ್ತಾಶ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಅಂಗವಾಗಿ ನಗರದ ನಮಬಾಗ, ಸಿಕ್ಯಾಬ್, ಲುಕ್ಮಾನ್ ಯುನಾನಿ ಕಾಲೇಜಿನಲ್ಲಿ 5 ವರ್ಷದೊಳಗಿನ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಜಿಲ್ಲಾ ಮಟ್ಟದ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲೆಯ ವಿವಿಧೆಡೆ 1,253 ಪೋಲಿಯೋ ಲಸಿಕಾ ಬೂತ್ ಸ್ಥಾಪಿಸಲಾಗಿದೆ. ನಿಗದಿ ತ ಗುರಿ ಸಾಧಿ ಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಜಿಲ್ಲೆಯಾದ್ಯಂತ 4 ದಿನ ನಡೆಯುವ ರಾಷ್ಟ್ರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಬೂತ್ ಮಟ್ಟದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಸೋಮವಾರದಿಂದ ಮೂರು ದಿನ ಆರೋಗ್ಯ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ ಎಂದು ವಿವರಿಸಿದರು.
ರಾಷ್ಟ್ರಾದ್ಯಂತ ಒಂದೇ ಸುತ್ತಿನ ಪೋಲಿಯೋ ಲಸಿಕಾ ಕಾರ್ಯಕ್ರಮ ಇದಾಗಿರುವುದರಿಂದ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿದ್ದರೂ ಕೂಡಾ ಈ ಬಾರಿ ತಮ್ಮ 5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವಂತೆ ಅವರು ಸಾರ್ವಜನಿಕರು ಹಾಗೂ ಮಕ್ಕಳ ಪಾಲಕರಲ್ಲಿ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಜಿಪಂ ಸಿಇಒ ಗೋವಿಂದರಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಮಹೇಂದ್ರ ಕಾಪ್ಸೆ ಹಾಗೂ ಸಿಬ್ಯಾಕ್ ಕಾಲೇಜಿನ ಮುಖ್ಯಸ್ಥರು ಸೇರಿದಂತೆ ಇತರರು ಇದ್ದರು.