Advertisement

3ರಿಂದ ಅತಿಸಾರ ನಿಯಂತ್ರಣ ಕಾರ್ಯಕ್ರಮ

04:59 PM Jun 01, 2019 | Naveen |

ವಿಜಯಪುರ: ತೀವ್ರತರ ಅತಿಸಾರ-ಭೇದಿ ನಿಯಂತ್ರಣಕ್ಕಾಗಿ ಜೂ. 3ರಿಂದ 17ರವರೆಗೆ ಜಿಲ್ಲೆಯಾದ್ಯಂತ ಅತಿಸಾರ ಭೇದಿ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಜಾಗೃತಿ ಕಾರ್ಯಕ್ರಮ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಈ ಗಂಭೀರ ವಿಷಯದಲ್ಲಿ ನಿರ್ಲಕ್ಷ್ಯತೋರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ವಿಕಾಸ ಸುರಳಕರ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಪೂರ್ವ ಸಿದ್ಧತೆಗಾಗಿ ಅಧಿಕಾರಿಗಳ ಸಭೆ ನಡೆಸಿದ ಅವರು, ಅತಿಸಾರ ಭೇದಿ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಜಾಗೃತಿ ಕಾರ್ಯಕ್ರಮಗಳು ಪರಿಣಾಮಕಾರಿ ರೀತಿಯಲ್ಲಿ ಹಮ್ಮಿಕೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಪ್ರತಿ ಶಾಲೆ ಮಕ್ಕಳಲ್ಲಿ ಮಧ್ಯಾಹ್ನದ ಬಿಸಿಯೂಟದ ಮುಂಚಿತವಾಗಿ ಕೈ ತೊಳೆಯುವ ಹಾಗೂ ಶುಚಿತ್ವದ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಆಹಾರ ತಯಾರಿಸುವಿಕೆ ಸಂದರ್ಭದಲ್ಲಿ ಕೈ ತೊಳೆಯುವ ಬಗ್ಗೆ ಮಾಹಿತಿ ನೀಡಬೇಕು. ವಿವಿಧ ಸಮುದಾಯದಲ್ಲಿ ಅತಿಸಾರ ಭೇದಿಯ ಮುಖ್ಯ ಕಾರಣ ಹಾಗೂ ಮುನ್ನೆಚ್ಚರಿಕಾ ವಿಧಾನಗಳ ಬಗ್ಗೆ ತಿಳಿ ಹೇಳುವಂತೆ ಸಲಹೆ ನೀಡಿದರು.

ಅತಿಸಾರ ಭೇದಿಯಿಂದ ಮರಣ ಹೊಂದುವ 5 ವರ್ಷದೊಳಗಿನ ಮಕ್ಕಳ ಪ್ರಮಾಣವನ್ನು ಶೂನ್ಯಕ್ಕೆ ತರುವ ದಿಸೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಇದಕ್ಕಾಗಿ ಅಧಿಕಾರಿಗಳೆಲ್ಲ ಸಮನ್ವಯದಿಂದ ಕೆಲಸ ಮಾಡಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಜಿಲ್ಲೆಯ 5 ವರ್ಷದೊಳಗಿನ ಮಕ್ಕಳ ಮನೆಗಳಿಗೆ ಒಆರ್‌ಎಸ್‌ ಪ್ಯಾಕೆಟ್ ಹಂಚಿಕೆ ಮಾಡಬೇಕು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪ್ರತಿ ಶಾಲೆಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅತಿಸಾರ ಭೇದಿ ತಡೆಗಟ್ಟುವ ವಿಧಾನಗಳ ಬಗ್ಗೆ ತಿಳಿ ಹೇಳಬೇಕು. ಜಿಲ್ಲೆಯಲ್ಲಿರುವ ವಿವಿಧ ಓವರ್‌ ಹೆಡ್‌ ಟ್ಯಾಂಕ್‌ಗಳ ಸ್ವಚ್ಛತೆ ಕುರಿತಂತೆ ಸೂಕ್ತ ನಿರ್ದೇಶನವನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು.

ಅದರಂತೆ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಅತಿಸಾರ ಭೇದಿಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಒಆರ್‌ಎಸ್‌ ಮತ್ತು ಜಿಂಕ್‌ ಕಾರ್ನರ್‌ಗಳನ್ನು ತೆರೆದು, ಜಿಲ್ಲೆಯಲ್ಲಿರುವ 5 ವರ್ಷದೊಳಗಿನ 2,87,566 ಎಲ್ಲ ಮಕ್ಕಳಿಗೆ ಕಾರ್ಯಕ್ರಮದಡಿ ಚಿಕಿತ್ಸೆ ನೀಡಬೇಕುಎಂದು ಸೂಚಿಸಿದರು. ಸಭೆಯಲ್ಲಿ ಅಧಿಕಾರಿಗಳು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next